ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

lakshdeepotsavam
19/11/2022

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ಶನಿವಾರ  ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ಜರುಗಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜಾ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು,  ರಾಜ್ಯಸಭೆಯ ಸದಸ್ಯರೂ ಆಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಉಪಸ್ಥಿತರಿದ್ದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಹೆಗ್ಗಡೆಯವರು ಕಳೆದ ಎರಡು ವರ್ಷಗಳಿಂದ ಕೊರೋನಾದಿಂದಾಗಿ ವಸ್ತುಪ್ರದರ್ಶನ ನಡೆಸಲಾಗಿರಲಿಲ್ಲ, ಈಬಾರಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ವೀಕ್ಷಿಸಲು ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ವಿವಿಧ ವಿಚಾರಗಳ ಬಗ್ಗೆ ಮಾಹಿತಿ ಹಾಗೂ ತಂತ್ರಜ್ಞಾನಗಳನ್ನು ಪರಿಚಯಿಸುವ ಮಳಿಗೆಗಳಿವೆ ಎಂದರು.

ಹೆಗ್ಗಡೆಯವರವ ಮೊಮ್ಮಗಳು ಮಾನ್ಯಾ, ಎಸ್‌ ಡಿಎ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಏನ್ ಜನಾರ್ಧನ್, ಹಾಗೂ ಇತರರು ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version