ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ತಿರುವು: ಅಪರಿಚಿತ ಟ್ರಕ್ ವಿರುದ್ಧ ದೂರು
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ನಿನ್ನೆ ನಡೆದಿತ್ತು. ಆದರೆ ಈ ಘಟನೆ ಇಂದು ಹೊಸ ತಿರುವು ಪಡೆದುಕೊಂಡಿದ್ದು, ಸಚಿವರ ಕಾರು ಚಲಾಯಿಸುತ್ತಿದ್ದ ಕಾರು ಚಾಲಕ ಶಿವಪ್ರಸಾದ್ ಅವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ಕಾರಿನ ಚಾಲಕ ಹಿಟ್ ಆ್ಯಂಡ್ ರನ್ ಕೇಸ್ ದಾಖಲಿಸಿದ್ದು, ಮುಂದೆ ಸಾಗುತ್ತಿದ್ದ ಟ್ರಕ್ ಏಕಾಏಕಿ ಎಡಬದಿಗೆ ಬಂದು ಕಾರನ್ನು ತಾಗಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ—ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾಗುತ್ತಿದ್ದ ವೇಳೆ, ಮುಂದಿನ ಲೈನ್ 1ರಲ್ಲಿ ಸಾಗುತ್ತಿದ್ದ ಕಂಟೈನರ್ ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ನೀಡದೇ ಎಡ ಬದಿಗೆ ಬಂದಿದ್ದಾನೆ. ಆಗ ಎಡ ಬದಿಗೆ ಕಾರನ್ನು ತೆಗೆದುಕೊಂಡಿದ್ದೇವೆ. ಆದರೂ ಟ್ರಕ್ ಚಾಲಕ ಕಾರಿನ ಬಲ ಭಾಗಕ್ಕೆ ತಾಗಿಸಿದ್ದಾನೆ. ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಮಾಡಿದ ನಂತರ ವಾಹನ ನಿಲ್ಲಿಸದೇ ಟ್ರಕ್ ಡ್ರೈವರ್ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿನ್ನೆ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಕೇಸ್ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: