ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ: ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಡಕಾಯಿತರಿಗೆ ಹೋಲಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸೊಗಡು ಶಿವಣ್ಣ ಡಿಕೆಶಿ ವಿರುದ್ಧ ಹರಿಹಾಯ್ದಿದ್ದು, ಚಿಕ್ಕನಾಯಕನಹಳ್ಳಿಯಲ್ಲಿ ಡಿಕೆಶಿ ಬೇನಾಮಿ ಆಸ್ತಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಆಲಿಬಾಬಾ ಗ್ಯಾಂಗ್ ನ ಡಕಾಯಿತ. ಈ ಡಕಾಯಿತನಿಗೆ 40 ಜನರ ಬೆಂಬಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪಾವಗಡದ ಸೋಲಾರ್ ಪಾರ್ಕ್ ನಲ್ಲಿ ಡಿಕೆಶಿ ಸಾವಿರಾರು ಕೋಟಿ ಅವ್ಯವಹಾರ ನಡೆಸಿದ್ದಾರೆ. ಡಿಕೆಶಿ ಹಾಗೂ ಗ್ಯಾಂಗ್ ಬೇನಾಮಿ ಹೆಸರಲ್ಲಿ ಜಮೀನು ಖರೀದಿಸಿ ಡಕಾಯಿತಿ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ: ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಮಾಡಿದ ವಿದ್ಯಾರ್ಥಿಗಳು
ನೈತಿಕ ಪೋಲಿಸ್ ಗಿರಿ: ಸಿಎಂ ಹೇಳಿಕೆ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತಿದೆ | ಸಿಪಿಐಎಂ ಆಕ್ರೋಶ
ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ
“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು