ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ | ಹೇಗಿದೆ ಅವರ ಆರೋಗ್ಯ ಸ್ಥಿತಿ?
ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಗೆ ಗಂಭೀರವಾದ ಏಟು ತಗುಲಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ, ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ, ಒಂದು ತಿಂಗಳು ಅವರು ಬೆಡ್ ರೆಸ್ಟ್ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಚೇತರಿಕೆಯಾಗುತ್ತಿದೆ. ಅವರಿಗೆ ಯಾವುದೇ ಶಸ್ತ್ರ ಚಿಕಿತ್ಸೆಯ ಅಗತ್ಯವಿಲ್ಲ, ಬಲವಾದ ಪೆಟ್ಟು ಬಿದ್ದ ಪರಿಣಾಮ ಬೆನ್ನಿನ ಮೂಳೆ ಮುರಿದಿದೆ. ಇನ್ನೆರಡು ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx