ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ - Mahanayaka

ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

24/01/2021

ನವದೆಹಲಿ: ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರು, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಾಂಚಿ ಆಸ್ಪ್ರತ್ರೆ ವೈದ್ಯರು ಏಮ್ಸ್ ಗೆ ದಾಖಲಿಸುವಂತೆ ಶಿಫಾರಸು ಮಾಡಿದ್ದರು.

 

ಈ ಹಿನ್ನೆಲೆಯಲ್ಲಿ ಕೋರ್ಟ್ ನ ಅನುಮತಿ ಪಡೆದು ಲಾಲು ಪ್ರಸಾದ್ ಯಾದವ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಲಿಸಿದ್ದಾರೆ. ಇನ್ನೂ ಲಾಲು ಪ್ರಸಾದ್ ಯಾದವ್ ಅವರ ಪುತ್ರ ಸುದ್ದಿ ತಿಳಿದು ದೆಹಲಿಗೆ ತೆರಳಿದ್ದಾರೆ. ಸದ್ಯ ಲಾಲು ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

 

 

ಇತ್ತೀಚಿನ ಸುದ್ದಿ