ನಿವೇಶನ ಹಂಚಿಕೆ ಹಗರಣ ಆರೋಪದ ಬೆನ್ನಲ್ಲೇ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ವರ್ಗಾವಣೆ - Mahanayaka

ನಿವೇಶನ ಹಂಚಿಕೆ ಹಗರಣ ಆರೋಪದ ಬೆನ್ನಲ್ಲೇ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ವರ್ಗಾವಣೆ

DrKV Rajendra
05/07/2024

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣದ ಆರೋಪ ಕೇಳಿ ಬಂದ ಬೆನ್ನಲ್ಲೇ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.


Provided by

ಅವರು 2022ರ ಅ.27ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ಹುದ್ದೆಯಿಂದ ದಿಢೀರ್ ವರ್ಗಾವಣೆ ಮಾಡಲಾಗಿದೆ. ಇದು ಚರ್ಚೆಗೆ ಗ್ರಾಸವಾಗಿದೆ.

ಮುಡಾಕ್ಕೆ ಅಧ್ಯಕ್ಷರನ್ನು ನೇಮಿಸುವವರೆಗೆ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಆಗ, ‘ಪ್ರಾಧಿಕಾರದಲ್ಲಿ ಕಾನೂನು ಬಾಹಿರವಾಗಿ ಆಸ್ತಿಗಳನ್ನು ಹಂಚಿಕೆ ಮಾಡುತ್ತಿರುವ ಬಗ್ಗೆ ಆಯುಕ್ತರನ್ನು (ಆಗ ಜಿ.ಟಿ.ದಿನೇಶ್‌ಕುಮಾರ್ ಇದ್ದರು) ವಿಚಾರಣೆ ನಡೆಸಬೇಕು.

ಅವರ ವಿರುದ್ಧ ಕೇಳಿಬಂದಿರುವ ಪ್ರತಿ ಆರೋಪಗಳನ್ನೂ ಪರಾಮರ್ಶಿಸಲು ಮತ್ತು ಉಂಟಾಗಿರುವ ನಷ್ಟದ ಸಂಬಂಧ ಕ್ರಮ ಕೈಗೊಳ್ಳಲು ಸರ್ಕಾರದ ಹಂತದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಅಭಿಪ್ರಾಯಿಸಿದೆ’ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಅಲ್ಲದೇ, ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ