ಸಿದ್ಧಾರ್ಥ್ ವಿಹಾರ ಟ್ರಸ್ಟಿಗೆ ನೀಡಿದ ಭೂಮಿ ವಾಪಸ್: ಸಚಿವ ಪ್ರಿಯಾಂಕ್ ಖರ್ಗೆ - Mahanayaka
11:51 AM Thursday 12 - December 2024

ಸಿದ್ಧಾರ್ಥ್ ವಿಹಾರ ಟ್ರಸ್ಟಿಗೆ ನೀಡಿದ ಭೂಮಿ ವಾಪಸ್: ಸಚಿವ ಪ್ರಿಯಾಂಕ್ ಖರ್ಗೆ

priyank kharge
13/10/2024

ಬೆಂಗಳೂರು: ಸಿದ್ಧಾರ್ಥ್ ವಿಹಾರ ಟ್ರಸ್ಟಿಗೆ ನೀಡಿದ ಭೂಮಿಯನ್ನು ವಾಪಸ್ ನೀಡಲು ತೀರ್ಮಾನಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿಯನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂದು ಆರೋಪವಿತ್ತು.
ಈ ವಿಚಾರದಲ್ಲಿ ರಾಹುಲ್ ಖರ್ಗೆಗ ಮಾಹಿತಿ ಇಲ್ಲ ಅನಿಸುತ್ತೆ. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ಇದರಿಂದ ಕುಟುಂಬದ ಸದಸ್ಯರಿಗೆ ಹಿಂಸೆಯಾಗುತ್ತಿದೆ ಎಂದು ನೊಂದಿದ್ದಾರೆ. ಹೀಗಾಗಿ ಸೆಪ್ಟೆಂಬರ್ 20ರಂದು ರಾಹುಲ್ ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ಕಾನೂನಾತ್ಮಕವಾಗಿ ಸೈಟು ವಾಪಸ್ ಕೊಡುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಸಂಪೂರ್ಣ ದಾಖಲೆಯ ಆಧಾರದ ಮೇಲೆ ಕೆಐಎಡಿಬಿ ನಿವೇಶನ ಸಿಕ್ಕಿತ್ತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎರಡು ಮೂರು ಕಾರಣ ನೀಡಿ ನಿವೇಶನವನ್ನು ವಾಪಸ್ ನೀಡಿದ್ದಾರೆ. ಇದು ಖಾಸಗಿ ಟ್ರಸ್ಟ್ ಅಲ್ಲ, ಪಬ್ಲಿಕ್ ಟ್ರಸ್ಟ್ ಎಂದು ನಮೂದಿಸಿದ್ದಾರೆ. ಸಿಎ ಸೈಟ್ ನಲ್ಲಿ ಯಾವುದೇ ರೀತಿ ರಿಯಾಯಿತಿ ಕೊಡಲು ಬರುವುದಿಲ್ಲ. ತರಬೇತಿಗೆ ಎಂದು ಪಡೆದಿದ್ದು, ಲಾಭದ ಉದ್ದೇಶ ಇರಲಿಲ್ಲ. ಆದರೆ ಬಿಜೆಪಿಯವರು ಹಲವು ರೀತಿಯ ಆರೋಪ ಮಾಡಿದರು. ವೈಯಕ್ತಿಕವಾಗಿ ರಾಜಕೀಯ ಆರೋಪದಿಂದ ಬೇಸರವಾಗಿದೆ. ಹೀಗಾಗಿ ಸೈಟ್ ಬೇಡ ಎಂದು ರಾಹುಲ್ ಖರ್ಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ