ವಾದ ಮಂಡಿಸುತ್ತಿದ್ದ ವೇಳೆಯೇ ಕುಸಿದು ಬಿದ್ದ ಮೃತಪಟ್ಟ ವಕೀಲ!

19/02/2025
ಹೈದರಾಬಾದ್: ಹಿರಿಯ ವಕೀಲರೊಬ್ಬರು ಕೋರ್ಟ್ ನಲ್ಲಿ ವಾದ ಮಂಡಿಸುತ್ತಿ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ತೆಲಂಗಾಣ ಹೈಕೋರ್ಟ್ನಲ್ಲಿ ನಡೆದಿದೆ.
ಪಿ.ವೇಣುಗೋಪಾಲ್ ರಾವ್ ಮೃತಪಟ್ಟವರು. ಇವರಿಗೆ 60 ವರ್ಷ ವಯಸ್ಸಾಗಿತ್ತು. ನ್ಯಾಯಾಲಯ ಸಂಖ್ಯೆ 21 ರಲ್ಲಿ ಪ್ರಕರಣವನ್ನು ಮಂಡಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದಾರೆ.
ಈ ವೇಳೆ ವಕೀಲರೊಬ್ಬರು ಅವರಿಗೆ CPR ನ್ನು ನಡೆಸಿದರು. ಆದರೂ ವಕೀಲರು ಬದುಕಿ ಉಳಿಯಲಿಲ್ಲ ಎಂದು ತೆಲಂಗಾಣ ಹೈಕೋರ್ಟ್ ವಕೀಲರ ಸಂಘದ ಸದಸ್ಯರೊಬ್ಬರು ತಿಳಿಸಿದ್ದಾರೆ.
ಹೈಕೋರ್ಟ್ನ ವೈದ್ಯಕೀಯ ತಂಡವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿತು, ಅಲ್ಲಿ ವೈದ್ಯರು ಅವರನ್ನು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: