ಲಕ್ಷ್ಮಣ್ ಸವದಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

laxman savadi car
31/08/2022

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮವಾಗಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಯಭಾಗ ತಾಲೂಕಿನ ಹಾರೋಗೇರಿ—ಹಿಡಕಲ್ ಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದ್ದು ಸದ್ಯದ ಮಾಹಿತಿಯ ಪ್ರಕಾರ ಕಾರಿಗೆ ಬೈಕ್ ವೊಂದು ಅಡ್ಡ  ಬಂದಿದ್ದು, ಅಪಘಾತವನ್ನು ತಪ್ಪಿಸಲು ಲಕ್ಷ್ಮಣ್ ಸವದಿ ಕಾರು ಚಾಲಕ  ಮುಂದಾಗಿದ್ದು, ಈ ವೇಳೆ ಕಾರು ಮಗುಚಿ ಬಿದ್ದಿದೆ ಎನ್ನಲಾಗಿದೆ.

ಮಗುಚಿ ಬಿದ್ದ ಕಾರು ಘಟಪ್ರಭಾ ಎಡದಂಡೆ ಕಾಲುವೆಗೆ  ಬಿದ್ದಿದ್ದು, ಸ್ಥಳೀಯರು ತಕ್ಷಣವೇ ಲಕ್ಷ್ಮಣ ಸವದಿ ಅವರನ್ನು ಕಾರಿಂದ ಹೊರಗೆಳೆದು ರಕ್ಷಿಸಿದ್ದಾರೆ. ಕಾರಿನ ಏರ್ ಬ್ಯಾಗ್ ತೆರೆದುಕೊಂಡಿರುವುದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version