ಗರ್ಭಿಣಿ ಹಸುವನ್ನು ಕೊಂದು, ಹೊಟ್ಟೆಯಲ್ಲಿದ್ದ ಕರುವನ್ನು ಎಸೆದು ಮಾಂಸ ಕೊಂಡೊಯ್ದರು!
ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಅಮಾನವೀಯ ಘಟನೆ ನಡೆದಿದೆ.
ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬವರಿಗೆ ಸೇರಿದ ಹಸು ಸಾವನ್ನಪ್ಪಿದ ಹಸುವಾಗಿದೆ.
ಮೇಯಲು ಬಿಟ್ಟಿದ್ದ ಹಸು ಶನಿವಾರ ರಾತ್ರಿ ಮನೆಗೆ ಬಂದಿರಲಿಲ್ಲ. ಸಾಕಷ್ಟು ಹುಡುಕಾಡಿದರೂ ಸಿಕ್ಕಿರಲಿಲ್ಲ, ಬೆಳಿಗ್ಗೆ ಹಸುವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ.
ಹತ್ಯೆ ಮಾಡಿದ ಸ್ಥಳದಲ್ಲಿ ಹಸುವಿನ ತಲೆ ಒಂದು ಕಡೆ, ಕಾಲುಗಳು ಮತ್ತೊಂದು ಕಡೆ ಪತ್ತೆಯಾಗಿದೆ. ಜೊತೆಗೆ ಗರ್ಭ ಧರಿಸಿದ್ದ ಹಸುವಿನ ಹೊಟ್ಟೆಯಲ್ಲಿದ್ದ ಕರುವನ್ನು ಅಲ್ಲೇ ಎಸೆದು ದನದ ಮಾಂಸವನ್ನು ಕೊಂಡೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಹೊನ್ನಾವರ ಪೊಲೀಸ್ ಠಾಣೆಗೆ ಘಟನೆ ಸಂಬಂಧ ದೂರು ನೀಡಿರುವ ಕೃಷ್ಣ ಆಚಾರಿ ಕಳೆದ 10 ವರ್ಷಗಳಿಂದ ನಾನು ಸಾಕಿದ್ದ ಕಪ್ಪು ಬಣ್ಣದ ಆಕಳನ್ನು ಜ. 18 ರಿಂದ 19ರ ನಡುವಿನ ಅವಧಿಯಲ್ಲಿ ಕಳವು ಮಾಡಿ ಅದನ್ನು ಸಾಯಿಸಿ ಗರ್ಭದಲ್ಲಿದ್ದ ಕರು ಸ್ಥಳದಲ್ಲಿ ಬಿಟ್ಟು ಆಕಳಿನ ಮಾಂಸ ತೆಗೆದುಕೊಂಡು ಹೋಗಿದ್ದಾರೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: