ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ವೇಳೆ ವ್ಯಕ್ತಿ ಸಾವು: ಇಬ್ಬರ ಬಂಧನ
ಹೈದರಾಬಾದ್: ಇಬ್ಬರು ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ಯೂಟ್ಯೂಬ್ ನೋಡಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಯತ್ನಿಸಿದ್ದರಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಪ್ರಕಾಶಂ ಜಿಲ್ಲೆಯ ಶ್ರೀಕಾಂತ್ (28) ಮೃತದುರ್ದೈವಿ. ಶ್ರೀಕಾಂತ್ ಕೆಲ ದಿನಗಳ ಹಿಂದೆ ಪತ್ನಿಯನ್ನು ತೊರೆದು ಒಂಟಿ ಜೀವನ ನಡೆಸುತ್ತಿದ್ದರು. ನಂತರ ಇಬ್ಬರು ಬಿಫಾರ್ಮಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕಿಸಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಕಡಿಮೆ ಬೆಲೆಗೆ ಆಪರೇಷನ್ ಮಾಡುವಂತೆ ಕೇಳಿಕೊಂಡು ಶಸ್ತ್ರ ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದರು.
ನಂತರ ಶಸ್ತ್ರ ಚಿಕಿತ್ಸೆಗಾಗಿ ಮೂವರು ಖಾಸಗಿ ಲಾಡ್ಜ್‌ನ ಕೊಠಡಿಯನ್ನು ಬಾಡಿಗೆ ಪಡೆದರು. ಮಸ್ತಾನ್ ಮತ್ತು ಜೀವಾ ಎಂಬ ಇಬ್ಬರು ವಿದ್ಯಾರ್ಥಿಗಳು ಯೂಟ್ಯೂಬ್‍ನಲ್ಲಿ ವೀಡಿಯೊವನ್ನು ಅನುಸರಿಸುವಾಗ ಕಾರ್ಯವಿಧಾನವನ್ನು ಪ್ರಾರಂಭಿಸಿದರು. ದುರದೃಷ್ಟವಶಾತ್ ಶಸ್ತ್ರಚಿಕಿತ್ಸೆ ವೇಳೆ ಶ್ರೀಕಾಂತ್ ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.
ಲಾಡ್ಜ್ ಸಿಬ್ಬಂದಿ ಕೊಠಡಿಯೊಳಗೆ ಶವ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮನೆಯಲ್ಲಿ ಸಣ್ಣ ಫಿರಂಗಿ ಸ್ಫೋಟ: ಇಬ್ಬರ ಸಾವು, ಐವರಿಗೆ ಗಂಭೀರ ಗಾಯ
ದಲಿತರು ಮಾಡಿ ಕೊಟ್ಟ ಕಬ್ಬಿನ ಹಾಲು ಕುಡಿಯಬೇಕೆ..? ಎಂದು ಪ್ರಶ್ನಿಸಿ ಕಬ್ಬಿನ ಅಂಗಡಿ ಧ್ವಂಸ, ಹಲ್ಲೆ
ಬ್ಯಾಂಕ್ ಆಫ್ ಬರೋಡಾ ಅಪ್ಲಿಕೇಶನ್ ಇನ್ ಸ್ಟಾಲ್ ಮಾಡಿಕೊಳ್ಳಿ ಈ ಲಾಭಗಳನ್ನು ಪಡೆಯಿರಿ
ಉಕ್ರೇನ್ ನ ಗ್ಯಾಸ್ ಪೈಪ್ ಲೈನ್ ಸ್ಫೋಟಿಸಿದ ರಷ್ಯಾ
ಧರ್ಮ-ದೇವರುಗಳನ್ನು ಮನುಷ್ಯರು ರಕ್ಷಿಸಬೇಕಾ ?