ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ: 200 ಮೀಟರ್ ವರೆಗೆ ಹೊತ್ತೊಯ್ದ ಚಿರತೆ
ಚಾಮರಾಜನಗರ: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ನಡೆದಿದೆ.
ಸೋಮವಾರ ರಾತ್ರಿ ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಬಾಲಕಿಯನ್ನು ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿರತೆ ದಾಳಿಗೊಳಗಾದ ಬಾಲಕಿಯನ್ನು ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ಸುಶೀಲ (6) ಎಂದು ಗುರುತಿಸಲಾಗಿದೆ. ಈಕೆ ರಾಮು ಹಾಗೂ ಲಲಿತಾ ಎಂಬ ಪುತ್ರಿಯಾಗಿದ್ದಾಳೆ.
ಬಾಲಕಿಯ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದ ಚಿರತೆ ಸುಮಾರು 200 ಮೀಟರ್ ವರೆಗೆ ಎಳೆದೊಯ್ದಿದೆ. ಈ ವೇಳೆ ಬಾಲಕಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ. ಬಾಲಕಿಯ ಚೀರಾಟ ಕೇಳಿ ಪೋಷಕರು ಹಾಗೂ ಗ್ರಾಮಸ್ಥರು ಕಳ್ಳರು ಬಂದಿರಬಹುದು ಎಂದೇ ಭಾವಿಸಿದ್ದರು. ಹೀಗಾಗಿ ದೊಣ್ಣೆ ಹಿಡಿದು ಬಂದಿದ್ದರು. ಗ್ರಾಮಸ್ಥರನ್ನು ಕಂಡ ತಕ್ಷಣವೇ ಬಾಲಕಿಯನ್ನು ಬಿಟ್ಟು ಚಿರತೆ ಪರಾರಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw