ಮೋದಿ ತಮ್ಮ ಬಗ್ಗೆ ಮಾತನಾಡುವುದು ಬಿಟ್ಟು ಜನರ ಬಗ್ಗೆ ಮಾತನಾಡಲಿ: ರಾಹುಲ್ ಗಾಂಧಿ
ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಾಗಲೆಲ್ಲಾ ಅವರ ಬಗ್ಗೆಯೇ ಮಾತನಾಡುತ್ತಾರೆ, ಅವರ ಬಗ್ಗೆ ಮಾತನಾಡುವುದನ್ನು ಬಿಟ್ಟು ಜನರ ಬಗ್ಗೆ ಮಾತಾಡುವುದನ್ನು ಆರಂಭಿಸಿ, ಚುನಾವಣಾ ಅರ್ಧ ಪ್ರಚಾರ ಮುಗಿಯುತ್ತಿದೆ, ಈಗಲಾದರೂ ಕರ್ನಾಟಕದ ಬಗ್ಗೆ ಮಾತನಾಡಿ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ನಮ್ಮ ಪಕ್ಷದ ಎಲ್ಲಾ ನಾಯಕರನ್ನು ಗೌರವಿಸುತ್ತೇನೆ, ಆದರಿಸುತ್ತೇನೆ. ಮೋದಿ ಅವರೇ ನೀವೇಕೆ ಯಾರಾ ಹೆಸರನ್ನು ತೆಗೆದುಕೊಳ್ಳಲ್ಲ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಹೆಸರನ್ನೂ ತೆಗೆದುಕೊಳ್ಳಲ್ಲ, ಏಕೆ..? 40% ಪರಿಣಾಮ, ನಿಮ್ಮ ನಾಯಕರು ಎಷ್ಟು ಭ್ರಷ್ಟರು ಅದಕ್ಕಾ..? ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಇಷ್ಟು ಬಾರಿ ನನ್ನನ್ನು ಆಕ್ರಮಣ ಮಾಡಿತೆಂದು ಮೋದಿ ಅವರು ಪಟ್ಟಿ ಮಾಡಿಕೊಂಡಿದ್ದಾರೆ, ನಿಮ್ಮ ಬಗ್ಗೆ ಮಾತಾಡುವುದನ್ನು ಕಡಿಮೆ ಮಾಡಿ, ಜನರ ಬಗ್ಗೆ ಮಾತನಾಡಿ ಎಂದು ರಾಗಾ ವ್ಯಂಗ್ಯ ಮಾಡಿದರು.
ಕಾಂಗ್ರೆಸ್ ಗ್ಯಾರಂಟಿಗಳನ್ನು ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟದಲ್ಲೇ ಮಂಜೂರು ಮಾಡುತ್ತೇವೆ, ನೀವು ಏನು ಮಾಡುತ್ತೀರಾ ಈಗಲಾದರೂ ಹೇಳಿ..? ನಮ್ಮ ಸರ್ಕಾರ ಬಂದ ಬಳಿಕ ಬಿಜೆಪಿ ಲೂಟಿ ಮಾಡಿರುವ ಹಣವನ್ನು ಜನರಿಗೇ ಕೊಡುತ್ತೇವೆ ಎಂದು ಭರವಸೆ ಕೊಟ್ಟರು.
ಈಗಿರುವ ಬಿಜೆಪಿ ಸರ್ಕಾರ ಪ್ರಜಾತಂತ್ರದ ಸರ್ಕಾರವಲ್ಲ, ಕಳ್ಳತನದಿಂದ ಹಿಡಿದಿರುವ ಸರ್ಕಾರ, ಖರೀದಿ ಮಾಡಿರುವ ಸರ್ಕಾರ, 40% ಲೂಟಿ ಮಾಡಿರುವ ಸರ್ಕಾರ, ನಮಗೆ ಜನರ ಭವಿಷ್ಯವನ್ನು ಉತ್ತಮಗೊಳಿಸುವ ಆಸೆ ಇದೆ ಎಂದರು.
ಕಾರ್ಯಕ್ರಮ 2 ತಾಸು ತಡವಾಗಿ ಆರಂಭಗೊಂಡು 20 ನಿಮಿಷದಲ್ಲಿ ಮುಗಿಯಿತು. 10 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಮಳೆ ನಡುವೆಯೂ ಕಾದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw