ಮಳೆ ಬರಲಿ, ವಧು ಸಿಗಲಿ: ಯುವಕರಿಂದ ಪಾದಯಾತ್ರೆ
ಚಾಮರಾಜನಗರ: ದೀಪಾವಳಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದ ಸುಮಾರು 100ಕ್ಕೂ ಅಧಿಕ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ಬೆಳಗ್ಗೆ ಪಾದಯಾತ್ರೆ ಹೊರಟಿದ್ದಾರೆ.
ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿ.ಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಹೆಣ್ಣು ಸಿಗದೆ ಮದುವೆ ಆಗದ ಕಾರಣ ಪಾದಯಾತ್ರೆ ಮಾಡುವ ಮೂಲಕ ಮಧು ಸಿಗಲೆಂದು ಮಾದಪ್ಪನ ಮೊರೆ ಹೋಗಿದ್ದಾರೆ.
ಈ ಸಂದರ್ಭದಲ್ಲಿ ಪಾದಯಾತ್ರೆ ಹೊರಟ ಯುವಕರು ಮಾತನಾಡಿ, ಪ್ರಸ್ತುತ ಬರಗಾಲ ಇರುವ ಹಿನ್ನೆಲೆ ಇದನ್ನು ಹೋಗಲಾಡಿಸಲು ನಾಡಿಗೆ ಉತ್ತಮ ಮಳೆ ಬೆಳೆಯಾಗಿ, ರೋಗ ರುಜಿನ ಬರದೆ ಆರೋಗ್ಯಕರವಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಲು ಪಾದಯಾತ್ರೆ ಹೊರಡಲಾಗಿದೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ರೈತರು ಮತ್ತು ಕೂಲಿ ಕಾರ್ಮಿಕರ ಮಕ್ಕಳ ಮದುವೆಗೆ ಹೆಣ್ಣು ಕೊಡಲು ಸಮಾಜವು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಹೆಣ್ಣು ಸಿಗಲೆಂದು ಮಾದಪ್ಪನ ಬಳಿಗೆ ತೆರಳಿ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪಾದಯಾತ್ರೆಯಲ್ಲಿ ಕೋಡಹಳ್ಳಿ ಗ್ರಾಮದ ಯುವಕರಾದ ಜವರ, ಮಹೇಶ್, ಮಹದೇವ, ಕೆಂಪ, ನಿಲೇಶ್, ಸ್ವಾಮಿ, ಸಿದ್ದರಾಜು, ಕೃಷ್ಣ, ಮಾಧು, ಕುಮಾರ, ಪ್ರಸಾದ್ ಸೇರಿದಂತೆ 100ಕ್ಕೂ ಅಧಿಕ ನೀಲಗಾರರು ಹಾಗೂ ಮಹದೇಶ್ವರ ಗುಡ್ಡರು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw