ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಅಂತ ಲೆಕ್ಕ ಹಾಕಲಿ: ಸಿಎಂ ಬೊಮ್ಮಾಯಿ - Mahanayaka
5:22 PM Wednesday 11 - December 2024

ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಅಂತ ಲೆಕ್ಕ ಹಾಕಲಿ: ಸಿಎಂ ಬೊಮ್ಮಾಯಿ

cm bommai sunil
29/11/2022

ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನಿಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಪ್ರತಿಕ್ರಿಯಿಸಿದ್ದಾರೆ.

ಚಾಮರಾಜಪೇಟೆಯ ಬಿ.ಎಸ್‌. ವೆಂಕಟರಾಮ್‌ ಕಲಾಭವನದಲ್ಲಿಸೈಲೆಂಟ್‌ ಸುನೀಲ್‌ ಭಾನುವಾರ ಬೃಹತ್‌ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್‌, ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌. ರಮೇಶ್‌ ಹಾಗೂ ಇತರರು ಸೈಲೆಂಟ್‌ ಸುನೀಲ್‌ ಜತೆಗೆ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ವ್ಯಾಪಕ ಆಕ್ಷೇಪ ಕೇಳಿಬಂದಿದೆ.

ಬಿಜೆಪಿ ನಾಯಕರು ರೌಡಿ ಸೈಲೆಂಟ್‌ ಸುನೀಲ್‌ ಜತೆ ವೇದಿಕೆಯಲ್ಲಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಬಿಜೆಪಿ ವಿರುದ್ಧ ಹಲವರು ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಕೂಡ ಟ್ವೀಟ್‌ ಮೂಲಕ ಬಿಜೆಪಿ ನಾಯಕರಿಗೆ ಚಾಟಿ ಬೀಸಿದೆ.

ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿಅಪರಾಧ ಪ್ರಕರಣ ಸಂಖ್ಯೆ ಏರದೇ ಇರುತ್ತದೆಯೇ? ಗೃಹ ಸಚಿವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಪ್ರಶ್ನಿಸಿದೆ.

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್‌ ಸುನೀಲ್‌ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್‌ . ಗೃಹ ಸಚಿವರೇ ಸೈಲೆಂಟ್‌ ಸುನೀಲನಿಗಾಗಿ ಪೊಲೀಸರು ಹುಡುಕುತ್ತಿರಲಿಲ್ಲವೇ. ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರಿರಲಿಲ್ಲವೇ. ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ