ನರೇಂದ್ರ ಮೋದಿ ಕನಸಿನ ಭಾರತ ನಿರ್ಮಾಣಕ್ಕೆ ಯಶ್ ಪಾಲ್ ಸುವರ್ಣ ಗೆಲುವು ಮುನ್ನುಡಿ ಬರೆಯಲಿ : ಕೋಟ ಶ್ರೀನಿವಾಸ ಪೂಜಾರಿ
ಬಿಜೆಪಿ ಈ ಬಾರಿ ಉಡುಪಿ ಕ್ಷೇತ್ರದ ಅಭ್ಯರ್ಥಿಯಾಗಿ ಕ್ರಿಯಾಶೀಲ ವ್ಯಕ್ತಿತ್ವದ ಸಾಮಾನ್ಯ ಕಾರ್ಯಕರ್ತ ಯಶ್ ಪಾಲ್ ಸುವರ್ಣ ರವರನ್ನು ಆಯ್ಕೆ ಮಾಡಿದ್ದು, ಭಾರತವನ್ನು ವಿಶ್ವ ಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಭಾರತ ನಿರ್ಮಾಣಕ್ಕೆ ಉಡುಪಿ ಕ್ಷೇತ್ರದಿಂದ ಯಶ್ ಪಾಲ್ ಸುವರ್ಣರ ಗೆಲುವು ಮುನ್ನುಡಿ ಬರೆಯಲಿದೆ ಎಂದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕೊಕ್ಕರ್ಣೆಯಲ್ಲಿ ಆಯೋಜಿಸಿದ್ದ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಹಿಂದೂ ಸಂಘಟನೆಯ ಕಾರ್ಯಕರ್ತನಾಗಿ, ನಗರ ಸಭಾ ಸದಸ್ಯರಾಗಿ, ಮೀನುಗಾರಿಕಾ ಫೆಡರೇಶನ್, ಮಹಾಲಕ್ಷೀ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ಮುಖಂಡರಾಗಿ ಗುರುತಿಸಿಕೊಂಡಿರುವ ರಾಷ್ಟ್ರೀಯವಾದಿ ಚಿಂತನೆಯ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣರನ್ನು ಗೆಲ್ಲಿಸಲು ಕ್ಷೇತ್ರದ ಮತದಾರರು, ಕಾರ್ಯಕರ್ತರು ಪಣತೊಟ್ಟಿದ್ದು, ಈ ಮೂಲಕ ಡಾ ವಿ ಎಸ್ ಆಚಾರ್ಯ ರವರ ಕನಸಿನ ನವ ಉಡುಪಿ ನಿರ್ಮಾಣದ ಜೊತೆ ಜೊತೆಗೆ ಡಬಲ್ ಇಂಜಿನ್ ಸರ್ಕಾರದ ಮೂಲಕ ಸರ್ವ ವ್ಯಾಪಿ ಸರ್ವ ಸ್ಪರ್ಶಿ ಆಡಳಿತಕ್ಕೆ ನಾಂದಿ ಹಾಡಲಿದೆ ಎಂದರು.
ಶಾಸಕ ರಘುಪತಿ ಭಟ್ ಮಾತನಾಡಿ ಕಳೆದ 3 ಅವಧಿಯಲ್ಲಿ ಶಾಸಕನಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ ಸಂತೃಪ್ತಿ ಇದ್ದು, ಮುಂದಿನ ದಿನದಲ್ಲಿ ಯಶ್ ಪಾಲ್ ಸುವರ್ಣ ಶಾಸಕರಾಗಿ ಈ ಅಭಿವೃದ್ಧಿ ಕಾರ್ಯಗಳಿಗೆ ಇನ್ನೂ ಹೆಚ್ಚಿನ ವೇಗ ತುಂಬುವ ಭರವಸೆ ಇದೆ ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಬಿ. ಎನ್. ಶಂಕರ ಪೂಜಾರಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಬಿ ಎನ್ ಶಂಕರ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಧನಂಜಯ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ಪಕ್ಷದ ಮುಖಂಡರಾದ ಹರಿಮಕ್ಕಿ ರತ್ನಾಕರ ಶೆಟ್ಟಿ, ರಾಜೇಶ್ ಶೆಟ್ಟಿ ಬಿರ್ತಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಮೇಶ್ ನಾಯ್ಕ್ ಚೇರ್ಕಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಉಪಸ್ಥಿತರಿದ್ದರು.
ಕೊಕ್ಕರ್ಣೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಕ್ಷೇತ್ರದಾದ್ಯಂತ ಮತದಾರರು ಹೊಸ ಹುರುಪಿನಿಂದ ಬಿಜೆಪಿಗೆ ವ್ಯಾಪಕ ಬೆಂಬಲ ನೀಡಿ ಪ್ರೋತ್ಸಾಹಿಸುತ್ತಿದ್ದು, ಕೊಕ್ಕರ್ಣೆಯ ಈ ಸಭೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿರುವ ಮತದಾರರೇ ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲಿದ್ದಾರೆ.
ಯಶ್ ಪಾಲ್ ಸುವರ್ಣ
ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ ಹಣ ನೇರ ಜಮೆಯಾಗುತ್ತಿದೆ, ಸಂಧ್ಯಾ ಸುರಕ್ಷಾ ಕೊಟ್ಟಿದೆ, ಭಾಗ್ಯ ಲಕ್ಷ್ಮೀ ಯೋಜನೆ ಕೊಟ್ಟಿದ್ದೇವೆ, ಇದಕ್ಕೆಲ್ಲಾ ಯಾವತ್ತೂ ಗ್ಯಾರಂಟಿ ಕಾರ್ಡ್ ನೀಡಿಲ್ಲ..ರಾಜ್ಯದ ಜನತೆಗೆ ಬಿಜೆಪಿ ಆಡಳಿತ, ನರೇಂದ್ರ ಮೋದಿಯವರ ಕಾರ್ಯವೈಖರಿ ಬಗ್ಗೆ ಯಾವುದೇ ಗ್ಯಾರಂಟಿ ಕಾರ್ಡ್ ಅವಶ್ಯಕತೆ ಇಲ್ಲ. ಈ ಬಾರಿ ಉಡುಪಿಯ ಜನತೆ ನಮ್ಮ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಗ್ಯಾರಂಟಿ ನೀಡಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw