LG ಕಂಪನಿಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನ - Mahanayaka

LG ಕಂಪನಿಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನ

lg
17/01/2025

LG Scholarship 2025 —  LG Electronics India Private Limited ಕಂಪನಿಯು ಅರ್ಹ ಮೆರಿಟ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಸಹಾಯವಾಗುವಂತೆ ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.

ಈ ಸಂಸ್ಥೆಯು “Life’s Good” ಎಂಬ ಹೆಸರಿನಲ್ಲಿ ಈ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಇದರನ್ವಯ ಅರ್ಹರಿಗೆ ವಿದ್ಯಾಭ್ಯಾಸಕ್ಕಾಗಿ ಒಂದು ಲಕ್ಷ ರೂ. ತನಕ ವಿದ್ಯಾರ್ಥಿವೇತನವು ಸಿಗಲಿದೆ.


ADS

ಯಾರಿಗೆ ಎಷ್ಟು ವಿದ್ಯಾರ್ಥಿವೇತನ?

* ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ — 50,000ರೂ.

* ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ — 1,00,000 ರೂ.

ಯಾವ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹರು?

* ಈ ವಿದ್ಯಾರ್ಥಿವೇತನಕ್ಕಾಗಿ ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರಬೇಕು.

* ವಾರ್ಷಿಕ ಕುಟುಂಬ ಆದಾಯವು 8 ಲಕ್ಷ ರೂ. ಒಳಗಿರಬೇಕು.

* ದ್ವಿತೀಯ ಪಿಯುಸಿ ಹಾಗೂ ಹಿಂದಿನ ಸೆಮಿಸ್ಟರ್ ನಲ್ಲಿ 60% ಕ್ಕಿಂತಲೂ ಹೆಚ್ಚಿನ ಅಂಕ ಪಡೆದು ಪಾಸಾಗಿರಬೇಕು.

ಮುಖ್ಯ ಮಾಹಿತಿ :

* ಅರ್ಜಿ ಸಲ್ಲಿಕೆಗೆ ಕೊನೆಯ ದಿನ — 31 ಜನವರಿ 2025

* ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ –  https://www.buddy4study.com/page/life-s-good-scholarship-program#singleScApply


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ