LIC ನಿವೃತ್ತ ಪಿಂಚಣಿದಾರರಿಂದ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಉಡುಪಿ: ಭಾರತೀಯ ಜೀವ ವಿಮಾ ನಿಗಮದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಎಲ್ ಐಸಿ ವಿಭಾಗೀಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಎಲ್ ಐಸಿ ನಿರ್ದೇಶಕ ಮಂಡಳಿ ಒಪ್ಪಿಗೆ ಸೂಚಿಸುವಂತೆ ಕುಟುಂಬ ಪಿಂಚಣಿಯನ್ನು ಶೇ.15ರಿಂದ30ಕ್ಕೆ ಹೆಚ್ಚಿಸಬೇಕು. ಆರೋಗ್ಯ ವಿಮಾಯೋಜನೆ ವ್ಯಾಪ್ತಿಗೆ ಸೇರಲು ಮತ್ತೊಂದು ಅವಕಾಶ ನೀಡಬೇಕು. ಪ್ರತೀ ವೇತನ ಪರಿಷ್ಕರಣೆ ಸಂದರ್ಭದಲ್ಲಿ ಪಿಂಚಣಿ ಪರಿಷ್ಕರಣೆ ಮಾಡಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಬೇಕು. ಹಿರಿಯ ನಾಗರಿಕರಿಗೆ ರೈಲ್ವೇ ಪ್ರಯಾಣದರದಲ್ಲಿ ರಿಯಾಯಿತಿ ಯನ್ನು ನೀಡಬೇಕು ಎಂದು ಆಗ್ರಹಿಸಲಾಯಿತು.
ಪಿಂಚಣಿದಾರರನ್ನು ಉದ್ದೇಶಿಸಿ ಸಂಘದ ಅಧ್ಯಕ್ಷ ಎ.ಮಧ್ವರಾಜ ಬಲ್ಲಾಳ್ ಬೇಡಿಕೆಗಳ ಬಗ್ಗೆ ವಿವರಣೆ ನೀಡಿದರು. ಪ್ರಧಾನ ಕಾರ್ಯದರ್ಶಿ ವಿಠ್ಠಲ ಮೂರ್ತಿ ಆಚಾರ್ಯ ಬೇಡಿಕೆಗಳ ಮನವಿಯನ್ನು ಉಡುಪಿಯ ಎಲ್ ಐ ಸಿ ಹಿರಿಯ ವಿಭಾಗಾಧಿಕಾರಿ ರಾಜೇಶ್ ಮುಧೋಳ್ ಅವರಿಗೆ ಸಲ್ಲಿಸಿದರು. ವಿಮಾ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೂ ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka