ಸಚಿವ ಜಮೀರ್ ಅಹ್ಮದ್ ಗೆ ಜೀವ ಬೆದರಿಕೆ: ಆರೋಪಿ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದ್ದು, ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಚಿವ ಜಮೀರ್ ಅಹ್ಮದ್ ಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಲಾಗಿತ್ತು.
ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಆರೋಪಿ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಫೇಸ್ ಬುಕ್ ಲೈವ್ ನಲ್ಲಿ ಜಮೀರ್ ಅಹ್ಮದ್ ಅವರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ್ದ ಆರೋಪಿ ಪುನೀತ್ ಕೆರೆಹಳ್ಳಿ, ಜೀವ ಬೆದರಿಯೊಡ್ಡಿದ್ದ. ಈ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ದೂರು ನೀಡಿದ್ದರು. ಈ ದೂರಿನನ್ವಯ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: