ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು 11 ಮಂದಿ ದಾರುಣ ಸಾವು - Mahanayaka
3:20 AM Wednesday 11 - December 2024

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು 11 ಮಂದಿ ದಾರುಣ ಸಾವು

lightning strikes
12/07/2021

ಜೈಪುರ: ಅಮೆರ್ ಪ್ಯಾಲೆಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, 11 ಮಂದಿ ದಾರುಣವಾಗಿ ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

12ನೇ ಶತಮಾನದ ಅಮೆರ್ ಪ್ಯಾಲೆಸ್ ನ ವಾಚ್ ಟವರ್ ಮೇಲೆ ಜನರು ಮಳೆಯಲ್ಲಿಯೇ ಸೆಲ್ಪಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ  ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿದ್ದಾರೆ.

ಇನ್ನೂ ಘಟನೆಯ ವೇಳೆ ಒಟ್ಟು 27 ಮಂದಿ ವಾಚ್ ಟವರ್ ಮೇಲೆ ಇದ್ದರು ಎಂದು ಹೇಳಲಾಗಿದ್ದು, ಏಕಾಏಕಿ ಸಿಡಿಲು ಬಡಿದ ಸಂದರ್ಭದಲ್ಲಿ ಭಯಭೀತರಾಗಿ ಕೆಲವರು ವಾಚ್ ಟವರ್ ನಿಂದ ಕೆಳಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಆದೇಶಿಸಿದ್ದಾರೆ.  ಸದ್ಯ ಅಧಿಕಾರಿಗಳು ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು:

ಆಸ್ಪತ್ರೆಯ ಕಿಟಕಿಯ ಗ್ರಿಲ್ ಮುರಿದು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ!

ಪ್ರೀತಿಯನ್ನು ಸಾಬೀತುಪಡಿಸಲು ತಂಪು ಪಾನೀಯದಲ್ಲಿ ವಿಷ ಸೇವಿಸಿದ ದಂಪತಿ | ಪತ್ನಿ ಸಾವು

ಉದ್ಯೋಗ ಮಾತ್ರವಲ್ಲ, ದಂಪತಿಯ ಪ್ರಾಣವನ್ನೂ ಕಸಿದುಕೊಂಡಿತು ಲಾಕ್ ಡೌನ್ | ಮಕ್ಕಳು ಅನಾಥ

ಬಾಡಿಗೆ ಬೇಡ, ಆಸೆ ಪೂರೈಸು ಎಂದು ಮನೆ ಮಾಲಿಕನಿಂದ ಮಹಿಳೆಗೆ ಕಿರುಕುಳ

ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ 1 ವರ್ಷದ ಮಗು ದಾರುಣ ಸಾವು

ಇತ್ತೀಚಿನ ಸುದ್ದಿ