ಲಿಂಗಾಯತ ಸಿಎಂ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ - Mahanayaka

ಲಿಂಗಾಯತ ಸಿಎಂ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

amith shah
23/04/2023

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಲ್ಲಿ ಪ್ರಭಾವಿ ಲಿಂಗಾಯತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಲಿಂಗಾಯತ ನಾಯಕರು ಬಿಜೆಪಿ ತೊರೆದಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸುವ ಪ್ರಯತ್ನಕ್ಕೆ ಕೈ ಹಾಕಿತು. ಆದರೆ ಇದಕ್ಕೆ ತಡೆಯೊಡ್ಡುವ ನಿಟ್ಟಿನಲ್ಲಿ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಲಿಂಗಾಯತ ಮುಖಂಡರೊಬ್ಬರನ್ನು ಬಿಂಬಿಸುವ ಪ್ರಸ್ತಾವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿಯ ಪ್ರಮುಖ ಲಿಂಗಾಯಿತ ಮುಖಂಡರಾಗಿದ್ದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಪಕ್ಷ ತೊರೆದಿರುವುದರಿಂದ, 224 ಸದಸ್ಯಬಲದ ವಿಧಾನಸಭೆಯಲ್ಲಿ ಅಗತ್ಯ ಬಹುಮತ (113 ಸ್ಥಾನ)ಕ್ಕಿಂತ 15-20 ಹೆಚ್ಚು ಸ್ಥಾನಗಳನ್ನು ಗೆಲ್ಲುವುದಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಶಾ ಶನಿವಾರ ಸ್ಪಷ್ಟಪಡಿಸಿದ್ದಾರೆ


Provided by

ಶೆಟ್ಟರ್ ಹಾಗೂ ಸವದಿಯಂತಹ ಲಿಂಗಾಯತ ಮುಖಂಡರು ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ತಡೆಯಲು ಲಿಂಗಾಯತ ಮುಖಂಡರೊಬ್ಬರನ್ನು ಸಿಎಂ ಅಭ್ಯರ್ಥಿಯಾಗಿ ಬಿಂಬಿಸುವಂತೆ ಪ್ರಸ್ತಾವ ಮುಂದಿಟ್ಟೆವು. ಆದರೆ ಇದು ಲಿಂಗಾಯತರನ್ನು ಹೊರತುಪಡಿಸಿ ಇತರ ಮತದಾರರ ಧ್ರುವೀಕರಣಕ್ಕೆ ಕಾರಣವಾಗುತ್ತದೆ ಎಂಬ ಕಾರಣ ನೀಡಿದ ಶಾ ನಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದರು” ಎಂದು ಶಾ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ಬಹಿರಂಗಪಡಿಸಿದ್ದಾರೆ.

ಡಬಲ್ ಎಂಜಿನ್ ಪ್ರಗತಿ ಮತ್ತು ಮೀಸಲಾತಿ ವಿಷಯವನ್ನು ಚುನಾವಣೆಯಲ್ಲಿ ಬಿಂಬಿಸುವಂತೆ ಶಾ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಎಪ್ರಿಲ್ 30ರ ಬಳಿಕ  ನರೇಂದ್ರ ಮೋದಿ ನಡೆಸುವ 20ಕ್ಕೂ ಹೆಚ್ಚು ರ‍್ಯಾಲಿಗಳನ್ನು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿ ಬಳಸಿಕೊಳ್ಳುವಂತೆಯೂ ಸಲಹೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ