ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು–1 ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43–ಅನಂತಾಡಿಯ ಗ್ರಾಮ ಪಂಚಾಯತ್‍ನ 2–ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1–ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4–ಆರ್ಯಾಪುವಿನಲ್ಲಿ 2023ರ ಫೆ.24ರ ಬೆಳಿಗ್ಗೆ 6 ಗಂಟೆಯಿಂದ ಫೆ.25ರ ಸಂಜೆ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw