ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿದ ಪೇಜಾವರ ಶ್ರೀ
ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು .
ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು . ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು .
ಶ್ರೀ ವಿಶ್ವೇಶತೀರ್ಥಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು . ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು .
ಅಡ್ವಾಣಿ ಯವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು . ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನವರೆಗೆ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು. ಈ ವೇಳೆ ತನಕ ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ , ಕೃಷ್ಣ ಭಟ್ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka