ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್ ಕಾನ್ಸ್ ಟೇಬಲ್ ನನ್ನು ಮಂಚಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು!

19/08/2023
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ವೋರ್ವನನ್ನು ಸ್ಥಳೀಯರು ಮಂಚಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ.
ಕಾನ್ಸ್ ಟೇಬಲ್ ಮಹೇಶ್ ಕುಮಾರ್ ಗುರ್ಜರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಸಾರ್ವಜನಿಕರಿಂದ ಧರ್ಮದೇಟು ಬಿದ್ದ ಬಳಿಕ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಆತನನ್ನು ಕರೆದೊಯ್ದು ಚಿಕಿತ್ಸೆ ನೀಡಿದ್ದರು. ಇದಾದ ಬಳಿಕ ಸಂತ್ರಸ್ತ ಮಹಿಳೆ ಪೊಲೀಸರಿಗೆ ಅತ್ಯಾಚಾರದ ಕುರಿತು ದೂರು ನೀಡಿದ್ದು, ದೂರು ದಾಖಲಾದ ಬೆನ್ನಲ್ಲೇ ಆರೋಪಿ ಮಹೇಶ್ ಕುಮಾರ್ ತಲೆಮರೆಸಿಕೊಂಡಿದ್ದಾನೆ.
ಮಹೇಶ್ ಕುಮಾರ್ ಗುರ್ಜರ್ ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದ. ಈ ವೇಳೆ ಆಕೆ ಜೋರಾಗಿ ಕೂಗಿಕೊಂಡಿದ್ದು, ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಕ್ರೋಶಗೊಂಡು ಆತನನ್ನು ಮಂಚಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ್ದರು.