ಲಾಡ್ಜ್ ಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ
ಹುಬ್ಬಳ್ಳಿ: ನಗರದ ಹೊಟೇಲ್ಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿ, ದಂಧೆಗೆ ಬಳಸಿಕೊಂಡಿದ್ದ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದಲ್ಲಿನ ಎಸ್.ಜಿ. ಟವರ್ಸ್ ಹಾಗೂ ಅಮೃತ ಕಂಫರ್ಟ್ ಹೊಟೇಲ್ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಮಾಲಕ ವೆಂಕಟೇಶ ನಾಯ್ಕ, ಮ್ಯಾನೇಜರ್ ವೀರೇಶ ಮುರುಡೇಶ್ವರ, ಕೆ.ಎಂ.ಪ್ರದೀಪ್ ಗೌಡ, ಮಂಜುನಾಥ್ ಗೌಡ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಹೊರ ರಾಜ್ಯದಿಂದ ಅಮಾಯಕ ಯುವತಿಯರನ್ನು ಕರೆತಂದು ಈ ದಂಧೆ ನಡೆಸಲಾಗುತ್ತಿತ್ತು. ಆರೋಪಿಗಳು ಆನ್‌ಲೈನ್ ಮೂಲಕ ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಮೂವರು ಯುವತಿಯರನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಈಶ್ವರಪ್ಪ, ಬಿ.ವೈ. ರಾಘವೇಂದ್ರ ಟಿಕೆಟ್ ತ್ಯಜಿಸಿ ಹರ್ಷನ ತಂಗಿ, ತಾಯಿಗೆ ನೀಡಲಿ: ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹೀಂ
ಬದುಕಿರುವ ವಾಪಸ್ ಕರೆ ತರದೆ ಹೆಣಗಳನ್ನು ತರುತ್ತಿದ್ದಾರೆ: ಡಿ.ಕೆ.ಶಿವಕುಮಾರ್
ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ: ಮೃತ ನವೀನ್ ತಂದೆ ಶೇಖರಗೌಡ
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಕಾಪಾಡಿದ ಬೌದ್ಧ ಧರ್ಮದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ: ಸಿಎಂಗೆ ಮನವಿ
ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಭೀಕರ ಹತ್ಯೆ