ಲಾಡ್ಜ್ ನಲ್ಲಿ ಬಾಲಕನ ಅತ್ಯಾಚಾರ | ಮದ್ರಸ ಶಿಕ್ಷಕನಿಗೆ 11 ವರ್ಷ ಜೈಲು
ತುಮಕೂರು: ನನಗೆ ಕನ್ನಡ ಕಲಿಸು ಎಂದು ಬಾಲಕನನ್ನು ಕರೆದೊಯ್ದು ಲಾಡ್ಜ್ ನಲ್ಲಿ ಅತ್ಯಾಚಾರ ನಡೆಸಿದ ತುಮಕೂರಿನ ಮದ್ರಸ ಶಿಕ್ಷಕನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 11 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, ಸಂತ್ರಸ್ತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ.
ಅಪರಾಧಿಯು ಉತ್ತರ ಪ್ರದೇಶ ಮೂಲದ 42 ವರ್ಷ ವಯಸ್ಸಿನ ಮುಫ್ತಿ ಮುಷರಫ್ ಆಗಿದ್ದು, ಈತ ತುಮಕೂರಿನ ಅಮಲಾಪುರ ಮದ್ರಸದಲ್ಲಿ ಶಿಕ್ಷಕನಾಗಿದ್ದ ಎಂದು ವರದಿಯಾಗಿದೆ. ರೈಲ್ವೆ ಟಿಕೆಟ್ ಬುಕಿಂಗ್ ಮಾಡಬೇಕು, ಕನ್ನಡ ಅರ್ಥವಾಗುತ್ತಿಲ್ಲ, ಕನ್ನಡ ಹೇಳಿಕೊಡು ಎಂದು ಬಾಲಕನನ್ನು ನಂಬಿಸಿದ್ದ ಆತ, ತನ್ನ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ, ಬಳಿಕ ಬಾಲಕನನ್ನು ಬೆದರಿಸಿ ಮನೆಗೆ ಕಳುಹಿಸಿದ್ದ.
ಈತನ ಕೃತ್ಯದಿಂದ ಹೆದರಿದ ಬಾಲಕ ತನ್ನ ತಾಯಿಗೆ ಈ ವಿಚಾರ ತಿಳಿಸಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೃಷ್ಣಯ್ಯ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ ಎಂದು ವರದಿಯಾಗಿದೆ.
ಇನ್ನಷ್ಟು ಸುದ್ದಿಗಳು…
ಆಸ್ತಿ ವಿವಾದ ಬಗೆಹರಿಸಲು ಬಂದ ಕೌನ್ಸಿಲರ್, ಎಸ್ ಐಯನ್ನು ಅಟ್ಟಾಡಿಸಿ ಹೊಡೆದ ಮಹಿಳೆ | ವಿಡಿಯೋ ವೈರಲ್
ನೀರಿಗೆ ಇಳಿಯಬೇಡಿ ಅಂದ್ರೂ ಇಳಿದರು… | ಸಮುದ್ರದಲ್ಲಿ ಮುಳುಗಿದ ನಾಲ್ವರ ಪೈಕಿ ಓರ್ವಳು ನೀರುಪಾಲು
ಅನಾಥ ಹುಡುಗಿಯನ್ನು ಮಗಳಂತೆ ಸಾಕಿ, ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟ ಮುಸ್ಲಿಮ್ ಕುಟುಂಬ
ನಟಿ ಶಕೀಲ ಸಾವಿನ ಸುಳ್ಳು ಸುದ್ದಿ ಹರಡಿದ ಯುವಕನಿಗೆ ಅವರು ಹೇಳಿದ್ದೇನು ಗೊತ್ತಾ?
ಉನ್ನಾವೋ ಸಂತ್ರಸ್ತೆಯ ಅಪಘಾತ ಪ್ರಕರಣ: ದೂರುದಾರರ ಆಕ್ಷೇಪಣೆ ರೋಮಾಂಚಕ ಕತೆಯಂತಿವೆ | ದೆಹಲಿ ನ್ಯಾಯಾಲಯ