ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ್ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು: ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮ ಆಸ್ತಿ ಸಂಪಾದನೆಯ ದೂರಿನ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆದಿದೆ.
ಏಕಕಾಲದಲ್ಲಿ ಗಂಗಾಧರ್ ಅವರ ಮನೆ, ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಜಯನಗರ ಬಡಾವಣೆಯಲ್ಲಿರುವ ಮನೆ, ರಾಮನಹಳ್ಳಿಯಲ್ಲಿರುವ ಬಂಕ್ , ಗಂಗಾಧರ್, ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಏಕಕಾಲದಲ್ಲಿ ಸುಮಾರು 50ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw