ಲಂಚ ಪಡೆದು ಎಂಜಿನಿಯರ್ ಗಳ ಪರಾರಿ ಯತ್ನ: ಚೇಸ್ ಮಾಡಿ ಬಂಧಿಸಿದ ಲೋಕಾ ಪೊಲೀಸ್
ಚಾಮರಾಜನಗರ: ಶಾಲಾ ಕಟ್ಟಡದ ಬಿಲ್ ಮಂಜೂರು ಮಾಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ಇಬ್ಬರು ಎಂಜಿನಿಯರ್ ಗಳು ಲೋಕಾ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಸಮೀಪ ಇಂದು ರಾತ್ರಿ ನಡೆದಿದೆ.
ಚಾಮರಾಜನಗರ ಲೋಕಪಯೋಗಿ ಇಲಾಖೆಯ ಎಇಇ ಕೆಂಪರಾಜು ಹಾಗೂ ಎಇ ಲಂಚ ಸ್ವೀಕರಿಸಿದ ಆರೋಪಿಗಳು. ಚಾಮರಾಜನಗರದ ಗುತ್ತಿಗೆದಾರ ಸುನೀಲ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಲೆಗೆ ಕೆಡವಿದ್ದಾರೆ.
ಬಾಗಳಿ ಗ್ರಾಮದಲ್ಲಿ ನಿರ್ಮಿಸಿದ್ದ ಶಾಲಾ ಕಟ್ಟಡಕ್ಕೆ ಬಿಲ್ ಮಂಜೂರಾತಿ ಮಾಡಲು 30 ಸಾವಿರ ಹಣಕ್ಕೆ ಬೇಡಿಕೆ ಇಟ್ಟು 30 ಸಾವಿರ ಹಣವನ್ನು ಪಡೆದಿದ್ದಾರೆ. ಇನ್ನೂ, ಲೋಕಾಯುಕ್ತ ಪೊಲೀಸರನ್ನು ಕಂಡು ಕಾಲ್ಕೀಳುವಾಗ ಹಿಂಬಾಲಿಸಿ ಇಬ್ಬರನ್ನು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ, ಇಬ್ಬರೂ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw