ಲೋಕಸಭಾ ಚುನಾವಣೆ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ! - Mahanayaka

ಲೋಕಸಭಾ ಚುನಾವಣೆ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ!

petrol diesel price
17/01/2024

ನವದೆಹಲಿ:  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ  ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಇಳಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಭಾರತದಲ್ಲಿ 2022ರ ಏಪ್ರಿಲ್ ತಿಂಗಳಿಂದಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಸ್ಥಿರವಾಗಿವೆ. ಆದ್ರೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಅಗ್ಗಗೊಂಡಿವೆ. ರಷ್ಯಾದಿಂದಲೂ ಕಡಿಮೆ ಬೆಲೆಗೆ ತೈಲವನ್ನು ಪಡೆಯಲಾಗುತ್ತಿದೆ. ಆದರೆ ಜನಸಾಮಾನ್ಯರನ್ನ ಭಾರತದ ಪೆಟ್ರೋಲಿಯಂ ಕಂಪನಿ ನಿರಂತರವಾಗಿ ಸುಲಿಗೆ ಮಾಡ್ತಿದೆ ಅನ್ನೋ ಆಕ್ರೋಶಗಳು ಕೂಡ ಕೇಳಿ ಬಂದಿವೆ.

ವರದಿಯ ಪ್ರಕಾರ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಸದ್ಯಕ್ಕೆ ಒಂದು ಲೀಟರ್​ ಗೆ 10 ರೂನಷ್ಟು ಲಾಭದ ಮಾರ್ಜಿನ್ ಹೊಂದಿವೆ. ಇದರಲ್ಲಿ ಒಂದಷ್ಟು ಮೊತ್ತವನ್ನು ಗ್ರಾಹಕರಿಗೆ ವರ್ಗಾಯಿಸಬಹುದು. ಪೆಟ್ರೋಲ್ ಮತ್ತು ಡೀಸಲ್ ಒಂದು ಲೀಟರ್​ ಗೆ 5ರಿಂದ 10 ರೂವರೆಗೆ ಬೆಲೆ ಇಳಿಕೆ ಕಾಣಬಹುದು ಎನ್ನಲಾಗಿದೆ.

ಪೆಟ್ರೋಲ್ ಡೀಸಲ್ ಬೆಲೆ ಇಳಿಕೆಯಿಂದ ಕೇಂದ್ರ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಲಾಭಗಳಿಸುವ  ಲೆಕ್ಕಾಚಾರಗಳನ್ನು ಹೊಂದಿದೆ ಎನ್ನಲಾಗ್ತಿದೆ.

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರನ್ನು ಕಿತ್ತು ತಿನ್ನುತ್ತಿದೆ. ಪ್ರತಿ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುತ್ತದೆ. ಚುನಾವಣೆ ಮುಗಿದ ಬಳಿಕ ಮತ್ತೆ ಯಥಾ ಸ್ಥಿತಿ ಏರಿಕೆಯಾಗುತ್ತಿದೆ ಅನ್ನೋ ಆರೋಪಗಳಿವೆ. ಈ ನಡುವೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ