ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವು

10/10/2022
ಕಾಪು: ಲಾರಿಯೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಇಂದು ಸಂಜೆ ನಡೆದಿದೆ.
ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು.
ಈ ಸಂದರ್ಭ ಹಿಂದಿನಿಂದ ಬಂದ ಟ್ರಕ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಫೀಕ್ ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka