ಲಾರಿಗಳ ಮುಖಾಮುಖಿ ಡಿಕ್ಕಿ: ಇಬ್ಬರು ಲಾರಿ ಚಾಲಕರ ದಾರುಣ ಸಾವು
ಹುಬ್ಬಳ್ಳಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾರೋಬೆಳವಡಿ ಗ್ರಾಮ ಬಳಿಯ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ವರದಿಗಳ ಪ್ರಕಾರ ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಎರಡೂ ಲಾರಿಯ ಚಾಲಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಎರಡೂ ಲಾರಿಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಈ ಭೀಕರ ಅಪಘಾತ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಧಾರವಾಡ ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕುಡಿದು ಪ್ರಜ್ಞೆ ಇಲ್ಲದೇ ಬಿದ್ದ ವರ: ತನ್ನ ಸಂಬಂಧಿಯನ್ನೇ ಮದುವೆಯಾದ ವಧು!
18 ದಿನಗಳ ಕಣ್ಣಾಮುಚ್ಚಾಲೆ ಬಳಿಕ ಸಿಐಡಿಗೆ ಸಿಕ್ಕಿ ಬಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ
ಮಂಗಳೂರು: ಹಾಡಹಗಲೇ ರೌಡಿಶೀಟರ್ ನ ಭೀಕರ ಹತ್ಯೆ
ಹೃದಯಾಘಾತಕ್ಕೂ ಮೊದಲು ಕಂಡು ಬರುವ ಮುನ್ಸೂಚನೆಗಳೇನು?
ಬ್ಯಾನರ್ ಹಾನಿಗೊಳಿಸಿದ್ದಕ್ಕೆ ಅಪ್ರಾಪ್ತ ಮಕ್ಕಳನ್ನು ಪೋಲಿಸ್ ಠಾಣೆಯಲ್ಲಿ ಕೂರಿಸಿದ ಪೊಲೀಸರು