ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಚಾಲಕ

ತಿರುವನಂತಪುರಂ: ಚಾಲಕನೊಬ್ಬ ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರ ಕಝಕೂಟಂನಲ್ಲಿ ನಡೆದಿದೆ.
ಲಾರಿ ಚಾಲಕ ಪತ್ತನಂತಿಟ್ಟ ಮೂಲದ ಸುಜಿತ್ (31)ಎಂದು ಗುರುತಿಸಲಾಗಿದೆ. ಕಿನ್ಫ್ರಾ ಫಿಲ್ಮ್ ಪಾರ್ಕ್ ಬಳಿ ಲಾರಿಯ ಒಂದು ಬದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಕಝಕೂಟಂ ಪೊಲೀಸರಿಗೆ ಮಾಹಿತಿ ನೀಡಿದರು.
ಘಟನಾ ಸ್ಧಳಕ್ಕೆ ಆಗಮಿಸಿದ ಪೊಲೀಸರು ತಪಾಸಣೆ ನಡೆಸಿ, ವ್ಯಕ್ತಿಯ ಗುರುತು ಪತ್ತೆ ಕಾರ್ಯ ನಡೆಸಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಲಾರಿಯನ್ನು ತಪಾಸಣೆ ಮಾಡಿದ ವೇಳೆ ಲಾರಿಯಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಲಾಲ್ ಮಾಂಸ ವಿವಾದ: ಪ್ರಚೋದನಾಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ | ಅರಗ ಜ್ಞಾನೇಂದ್ರ
ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ಬಹಿಷ್ಕಾರ ಹಾಕುತ್ತೀರಾ? | ಕುಮಾರಸ್ವಾಮಿ ಪ್ರಶ್ನೆ
ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಮುಸ್ಲಿಂ ಯುವಕನ ಹತ್ಯೆ; ನಾಲ್ವರ ಬಂಧನ
ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
ಗೋಕಾಕ್ ಜನತೆಗೆ ಸಿಹಿ ಸುದ್ದಿ ನೀಡಿದ ರಮೇಶ್ ಜಾರಕಿಹೊಳಿ: ಉಚಿತ ಚಿತ್ರ ಪ್ರದರ್ಶನಕ್ಕೆ ಅವಕಾಶ