ಪ್ರೀತಿಸು ಎಂದು ಪಾಗಲ್ ಪ್ರೇಮಿ ಹುಚ್ಚಾಟ: ಪಿಯು ವಿದ್ಯಾರ್ಥಿನಿ ಸೂಸೈಡ್
ಚಾಮರಾಜನಗರ: ಪ್ರೀತಿಸು ಎಂದು ಪಾಗಲ್ ಪ್ರೇಮಿಯೋರ್ವ ಪೀಡಿಸುತ್ತಿದ್ದರಿಂದ ಮನನೊಂದು ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಣಕಣಪುರ ಗ್ರಾಮದಲ್ಲಿ ನಡೆದಿದೆ.
ಹೊಣಕಣಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಮೃತ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಶ್ರೀನಿ ಎಂಬಾತ ವಿದ್ಯಾರ್ಥಿನಿ ಹಿಂಬಾಲಿಸುವುದು, ಮೊಬೈಲ್ ಗೆ ಸಂದೇಶ ಕಳುಹಿಸುವುದು ಪ್ರೀತಿಸು ಎಂದು ಪೀಡಿಸುತ್ತಿದ್ದ ಎಂದು ಮೃತಳ ಪಾಲಕರು ದೂರು ಕೊಟ್ಟಿದ್ದಾರೆ.
ಮೃತಳು ನಂಜನಗೂಡಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದು ಆಕೆಯನ್ನು ಶ್ರೀನಿ ಎಂಬಾತ ನಿತ್ಯ ಹಿಂಬಾಲಿಸಿ ಪೀಡಿಸುತ್ತಿದ್ದರಿಂದ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw