ಯುವತಿಯನ್ನು ಕೊಂದು ಪೀಸ್ ಪೀಸ್ ಮಾಡಿ, ತಲೆಯನ್ನು ಕುಕ್ಕರ್ ಬೇಯಿಸಿದ ಪ್ರಿಯಕರ: ದೇಶವನ್ನೇ ಬೆಚ್ಚಿಬೀಳಿಸಿದ ಘಟನೆ
ಮುಂಬೈ: ಲೀವಿಂಗ್ ಟುಗೆದರ್ ನಲ್ಲಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿದ ವ್ಯಕ್ತಿ, ಮೃತದೇಹದ ತಲೆಯನ್ನು ಕುಕ್ಕರ್ ನಲ್ಲಿ ಬೇಯಿಸಿದ ಅಮಾನವೀಯ ಘಟನೆ ಮುಂಬೈನ ಮೀರಾ ರೋಡ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
32 ವರ್ಷ ವಯಸ್ಸಿನ ವೈದ್ಯೆ ಸರಸ್ವತಿ ಹತ್ಯೆಗೀಡಾದ ಯುವತಿಯಾಗಿದ್ದು, 56 ವರ್ಷದ ಮನೋಜ್ ಸಹಾನಿ ಹತ್ಯೆ ಆರೋಪಿಯಾಗಿದ್ದಾನೆ. ಈತ ಲಿವಿಂಗ್ ಟುಗೆದರ್ ನಲ್ಲಿದ್ದ ಯುವತಿಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಯುವತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಮನೋಜ್ ಸಹಾನಿ, ಆಕೆಯ ದೇಹವನ್ನು 20 ತುಂಡುಗಳಾಗಿ ಕತ್ತರಿಸಿದ್ದಾನೆ. ಬಳಿಕ ಆಕೆಯ ತಲೆಯನ್ನು ಕುಕ್ಕರ್ ಸ್ಟವ್ ನಲ್ಲಿ ಬೇಯಿಸಿದ್ದಾನೆ. ಈ ವೇಳೆ ಅಪಾರ್ಟ್ ಮೆಂಟ್ ನ 704 ನಂಬರ್ ನ ಫ್ಲ್ಯಾಟ್ ನವರಿಗೆ ವಾಸನೆ ಬಂದಿದ್ದು, ಅಕ್ಕಪಕ್ಕದ ಫ್ಲ್ಯಾಟ್ ನವರು ಸೇರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಲಿವಿಂಗ್ ಟುಗೆದರ್ ನಲ್ಲಿದ್ದ ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw