ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ 50 ರೂ. ಹೆಚ್ಚಳ!

07/04/2025
ನವದೆಹಲಿ: ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಗ್ರಾಹಕರಿಗೆ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 50 ರೂ. ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ.
ಈ ಹೆಚ್ಚಳವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳು ಮತ್ತು ಫಲಾನುಭವಿಗಳಲ್ಲದವರಿಗೆ ಅನ್ವಯಿಸುತ್ತದೆ. ಪರಿಷ್ಕೃತ ಬೆಲೆಗಳು ಏಪ್ರಿಲ್ 8 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಇತ್ತೀಚಿನ ಅಬಕಾರಿ ಸುಂಕ ಹೆಚ್ಚಳವು ಗ್ರಾಹಕರಿಗೆ ಹೊರೆಯಾಗುವುದಿಲ್ಲ ಎಂದು ಪುರಿ ಇದೇ ವೇಳೆ ಸ್ಪಷ್ಟಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD