ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ: ಗಾಯದ ಮೇಲೆ ಬರೆ!
ನವದೆಹಲಿ: ದೇಶದಲ್ಲಿ ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಅಘಾತವಾಗಿದೆ. ಮತ್ತೊಮ್ಮೆ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳವಾಗಿದೆ.
ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಏರಿಸಲಾಗಿದೆ. ಈ ಹೆಚ್ಚಳದ ನಂತರ, ದೇಶೀಯ ಸಿಲಿಂಡರ್ ಈಗ ದೇಶಾದ್ಯಂತ ಅಂದಾಜು ಎಲ್ಲಾ ನಗರಗಳಲ್ಲಿ 1,000 ರೂ. ಗಡಿ ದಾಟಿದೆ.
ದೆಹಲಿ ಮತ್ತು ಮುಂಬೈನಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 1,003 ರೂ., ಕೋಲ್ಕತಾದಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 1029 ರೂ., ಚೆನ್ನೈನಲ್ಲಿ ಇಂದಿನಿಂದ 1018.5 ರೂ.ಆಗಿರುತ್ತದೆ.
ಇದಕ್ಕೂ ಮೊದಲು ಮೇ 7 ರಂದು, ಸಿಲಿಂಡರ್ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ, ಕಮರ್ಷಿಯಲ್ ಸಿಲಿಂಡರ್ ಸಹ ದುಬಾರಿಯಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಲೆ ನೋವಾಗುತ್ತಿದೆ ಎಂದು ಕೋಣೆಗೆ ತೆರಳಿದ ಸ್ಯಾಕ್ಸೋಫೋನ್ ವಾದಕಿ ನೇಣಿಗೆ ಶರಣು
ಕೆರೆಯಲ್ಲಿ ಮುಳುಗಿ 9ನೇ ತರಗತಿಯ ಇಬ್ಬರು ಬಾಲಕರು ಸಾವು
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ