ರೈಲ್ವೇ ಕ್ರಾಸಿಂಗ್‌ನಲ್ಲಿ ರೆಡ್ ಸಿಗ್ನಲ್ ಇದ್ರೂ ಬಸ್ ಚಾಲನೆ: ಕೊನೆಗೂ 40 ಮಕ್ಕಳ ರಕ್ಷಣೆ
ರಸ್ತೆಗೆ ಅಡ್ಡವಾಗಿರುವ ರೈಲ್ವೆ ಗೇಟ್ ಹಾಕುತ್ತಿದ್ದಾಗಲೂ ವಾಹನ ಚಲಾಯಿಸಿ ದಾಟಲು ಪ್ರಯತ್ನಿಸುವ ಚಾಳಿ ಬಹಳಷ್ಟು ಮಂದಿಯಲ್ಲಿ ಇದರುತ್ತದೆ ಇಂತಹ ಸಾಹಸಕ್ಕೆ ಇಳಿ ಶಾಲಾ ಬಸ್ ಚಾಲಕನೋರ್ವ 40 ಮಕ್ಕಳನ್ನು ಅಪಾಯಕ್ಕೆ ಒಡ್ಡಿದ ಘಟನೆ ನಾಗ್ಪುರದಲ್ಲಿ ನಡೆದಿದೆ. ಲೋಕೋ ಪೈಲಟ್ ಮತ್ತು ಸ್ಥಳೀಯರ ಸಮಯೋಚಿತ ಪ್ರಯತ್ನ 40 ವಿದ್ಯಾರ್ಥಿಗಳ ಜೀವ ಉಳಿಸಿದೆ.
ಲೆವೆಲ್ ಕ್ರಾಸಿಂಗ್‌ನಲ್ಲಿ ರೆಡ್ ಸಿಗ್ನಲ್ ಇದ್ದರೂ ಶಾಲಾ ಬಸ್ ಚಾಲಕ ಬಸ್ ನಿಲ್ಲಿಸದೆ ಮುಂದೆ ಸಾಗಿದ್ದಾರೆ. ಬಸ್ ಹಳಿಗಳ ಮೇಲೆ ಇದ್ದಾಗ ಲೆವೆಲ್ ಕ್ರಾಸಿಂಗ್‌ನ ಎರಡೂ ಗೇಟ್‌ಗಳನ್ನು ಮುಚ್ಚಲಾಯಿತು.
ಇದೇ ಸಮಯದಲ್ಲಿ ಮಧ್ಯಪ್ರದೇಶದ ಛಿಂದ್ವಾರಾದಿಂದ ನಾಗ್ಪುರದ ಇಟ್ವಾರಿಗೆ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಕೆಲವೇ ಕ್ಷಣಗಳಲ್ಲಿ ಅಲ್ಲಿಗೆ ಆಗಮಿಸುತ್ತಿದ್ದ ರೈಲು ಚಾಲಕನಿಗೆ ರೈಲು ನಿಲ್ಲಿಸುವಂತೆ ಸೂಚಿಸಲು ಸ್ಥಳೀಯರು ಹಳಿಗಳ ಮೇಲೆ ಆಗಮಿಸಿ ಅಪಾಯದ ಬಗ್ಗೆ ಸೂಚನೆ ನೀಡಿದ್ದಾರೆ.
ಹಳಿಗಳ ಮೇಲೆ ಅನೇಕ ಜನರು ಜಮಾಯಿಸಿದ್ದನ್ನು ಗಮನಿಸಿದ ಲೋಕೋ ಪೈಲಟ್ ಏನೋ ಸರಿಯಿಲ್ಲ ಎಂದು ಅರಿತು ಬ್ರೇಕ್ ಹಾಕಿದ್ದಾರೆ. ಹೀಗಾಗಿ ರೈಲು ಲೆವೆಲ್ ಕ್ರಾಸಿಂಗ್ ಸಮೀಪ ಬಂದು ನಿಂತಿದೆ.
ನಂತರ ಹತ್ತು ನಿಮಿಷಗಳಲ್ಲಿ ಗೇಟ್ ಓಪನ್ ಮಾಡಲಾಯಿತು ಮತ್ತು ಶಾಲಾ ಬಸ್ ಸುರಕ್ಷಿತವಾಗಿ ಇನ್ನೊಂದು ಬದಿಗೆ ದಾಟಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth