ಲೂಡ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು - Mahanayaka

ಲೂಡ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು

ludo
18/10/2022

ಶಂಕರನಾರಾಯಣ: ಮೊಬೈಲ್ ನಲ್ಲಿ ಲೂಡ ಆಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಅ.16ರಂದು ರಾತ್ರಿ ವೇಳೆ ಶಂಕರನಾರಾಯಣ ಕೌಲಾಳಿ ಎಂಬಲ್ಲಿ ನಡೆದಿದೆ.


Provided by

ಮೃತರನ್ನು ಕೌಲಾಳಿ ನಿವಾಸಿ ಜಯರಾಮ (30) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ ಜೊತೆ ಮೊಬೈಲ್ ನಲ್ಲಿ ಲೂಡ ಆಡುತ್ತಿದ್ದರು. ಈ ವೇಳೆ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರು, ಶಂಕರನಾರಾಯಣದ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ


Provided by

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಮನೆಯ ಕಿಟಕಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಕೋಟೇಶ್ವರ ಗ್ರಾಮದ ಮಾರ್ಕೊಡು ಎಂಬಲ್ಲಿ ನಡೆದಿದೆ.

ಕೋಟೇಶ್ವರ ಗ್ರಾಮದ ಮಾರ್ಕೊಡು ನಿವಾಸಿ 55ವರ್ಷದ ಜಯರಾಮ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಫುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ