ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ - Mahanayaka
11:28 PM Wednesday 5 - February 2025

ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

neet
04/02/2022

ನವದೆಹಲಿ ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡಿದೆ.

ಗುರುವಾರ ಹೊರಡಿಸಿದ ಆದೇಶದಲ್ಲಿ, ನೀಟ್‌ ಪಿಜಿ 2022 ಪರೀಕ್ಷೆಯ ದಿನಾಂಕವನ್ನು 6-8 ವಾರಗಳವರೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲೇ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.

ಫೆ. 4ರಂದು ನ್ಯಾಯಮೂರ್ತಿಗಳಾದ ಡಿ. ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ. ಕಡ್ಡಾಯ ಇಂಟರ್ನ್‌ಶಿಪ್‌ ಪೂರೈಸದ ಕಾರಣ ಪರೀಕ್ಷೆ ಮಂದೂಡುವಂತೆ ಆರು ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದರು. ಕೋವಿಡ್ ಕರ್ತವ್ಯದಿಂದಾಗಿ ಇಂಟರ್ನ್‌ಶಿಪ್‌ ಸ್ಥಗಿತಗೊಂಡಿವೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

ವೈದ್ಯಕೀಯ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಧರಣಿ

ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ

ಬಿಎಸ್‌ಪಿ ಮಾತ್ರ ದೇಶಕ್ಕೆ ಅಚ್ಛೇದಿನ್ ತರಬಲ್ಲ ಪಕ್ಷ: ಮಾಯಾವತಿ

ಕಣ್ಣಿಗೆ ಜಿಗಣೆ ಹೋಗಿದೆ ಎಂದು ಕಣ್ಣಿನ ಗುಡ್ಡೆಯನ್ನೇ ಕಿತ್ತೆಸೆದ ವ್ಯಕ್ತಿ

 

ಇತ್ತೀಚಿನ ಸುದ್ದಿ