ಫಲ್ಗುಣಿ ನದಿಗೆ ಸೇರುತ್ತಿರುವ ಎಂಆರ್ ಪಿಎಲ್, ಎಸ್ ಇಝಡ್ ತ್ಯಾಜ್ಯ: ಕಪ್ಪು ಬಣ್ಣಕ್ಕೆ ತಿರುಗಿದ ನೀರು

phalguni
03/03/2023

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯ ಎಂಆರ್ ಪಿಎಲ್,, ಎಸ್ ಇಝಡ್ ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ನೀರು ಕಪ್ಪು ಬಣ್ಣಕ್ಕೆ ತಿರುಗಿ ಪೂರ್ತಿ ಕೊಳೆತು ನಾರುತ್ತಿದೆ. ನೇರವಾಗಿ ಪಲ್ಗುಣಿ ನದಿಗೆ ಸೇರುತ್ತಿದೆ.  ಈ ಕುರಿತು ಇಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿಗೆ ಹೋರಾಟ ಸಮಿತಿ ಜೋಕಟ್ಟೆ ದೂರು ನೀಡಿದ ಪ್ರಯುಕ್ತ ಪ್ರಾದೇಶಿಕ ಅಧಿಕಾರಿ ರಮೇಶ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿತು,

ನೀರಿನ ಸ್ಯಾಂಪಲ್ ಸಂಗ್ರಹಿಸಿತು.‌ ಕೈಗಾರಿಕಾ ಮಾಲಿನ್ಯ ಆಗುತ್ತಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿರುವುದಾಗಿ ಒಪ್ಪಿಕೊಂಡಿತು. ಈ ಕುರಿತು ಸರಿಯಾದ ತನಿಖೆ ನಡೆಸಿ ತಪ್ಪಿತಸ್ಥ ಕಂಪೆನಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು, ಪಲ್ಗುಣಿ ನದಿಯನ್ನು ಉಳಿಸಲು ನಾಗರಿಕ ಹೋರಾಟ ಸಮಿತಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಆಗ್ರಹಿಸಿತು.‌ ಇಲ್ಲದಿದ್ದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿತು.

ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಜೋಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಫಾರೂಕ್, ಪಂಚಾಯತ್ ಸದಸ್ಯ, ಹೋರಾಟ ಸಮಿತಿ ಪ್ರಮುಖ ಅಬೂಬಕ್ಕರ್ ಬಾವ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version