ಮಂಗಳೂರಿಗೆ ಆಗಮಿಸಿದ ಎಂ.ಎಸ್.ಧೋನಿಯನ್ನು ಸ್ವಾಗತಿಸಿದ ಯು.ಟಿ.ಖಾದರ್ ಸಹೋದರ
ಟೀಮ್ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು. ಇವರನ್ನು ನೋಡಿ ಏರ್ ಪೋರ್ಟ್ ನಲ್ಲಿ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.
ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತನಾದ ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ.ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw