ನಾನು ಕೇಂದ್ರ ಸಚಿವನಾಗಿದ್ದಾಗ ಆ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿತ್ತು: ವೀರಪ್ಪ ಮೊಯ್ಲಿ - Mahanayaka
6:18 PM Thursday 12 - December 2024

ನಾನು ಕೇಂದ್ರ ಸಚಿವನಾಗಿದ್ದಾಗ ಆ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿತ್ತು: ವೀರಪ್ಪ ಮೊಯ್ಲಿ

veerappa moily
03/01/2023

ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ ಇದ್ದಂತೆ ಎಂದು ಕೇಂದ್ರ  ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಮಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಕೇಂದ್ರದಲ್ಲಿ ಸಚಿವನಾಗಿದ್ದಾಗ ಆ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿತ್ತು. ಇಂತಹ ವ್ಯಕ್ತಿ ಕಾಂಗ್ರೆಸ್‌ ಗೆ ಹಿತವಚನ ನೀಡಬೇಕಾಗಿಲ್ಲ. ಅವರೊಬ್ಬ ಸಂವಿಧಾನವನ್ನು ಓದದ ವ್ಯಕ್ತಿ ಎಂದು ಕುಟುಕಿದರು.

ದೇಶದಲ್ಲಿ ಬಿಜೆಪಿ ಗೊಂದಲವನ್ನುಂಟು ಮಾಡಿ, ಕದಡಿದ ನೀರಲ್ಲಿ ಮೀನು ಹಿಡಿಯುವ ಪ್ರಯತ್ನ ಮಾಡುತ್ತಿದೆ. ಈ ಸಂದರ್ಭದಲ್ಲಿ ಜನರನ್ನು ಸರಿಯಾದ ದಾರಿಯಲ್ಲಿ ನಡೆಸಲು ಕಾಂಗ್ರೆಸ್ ಶ್ರಮಿಸುತ್ತಿದೆ  ಎಂದು ಹೇಳಿದರು.

ಆರ್ಥಿಕ, ಸಾಮಾಜಿಕವಾಗಿ ದೇಶ ಸಂಕಷ್ಟದ ಸ್ಥಿತಿಯಲ್ಲಿದೆ. ದೇಶದ  ಪರಿಸ್ಥಿತಿ ಬಿಗಡಾಯಿಸಿದೆ. ಮುಂದೆ ದೇಶ  ಅಂತರಾಷ್ಟೀಯ ಅರ್ಥಿಕ ಬಿರುಗಾಳಿಯಲ್ಲಿ ಕೊಚ್ಚಿ ಹೋಗಬಾರದು. ನಾವು ಅದನ್ನು ಎದುರಿಸಲು  ತಯಾರಿ ಮಾಡಬೇಕಾಗಿದೆ. ನಮ್ಮ ದೇಶದ ಸಂಸ್ಕೃತಿ ವಿಮುಖವಾಗಿ ಸಾಗುತ್ತಿದೆ. ಇದು ಯಾವ ರೀತಿಯಲ್ಲಿ ಹೋಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ರಾಜಕೀಯ, ಆರ್ಥಿಕ, ಸಾಮಾಜಿಕ ಸುಭದ್ರತೆ  ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಶಿಥಿಲವಾಗುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಬದುಕು ಶಿಥಿಲವಾಗುತ್ತದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ