ಮಚ್ಚಿನಿಂದ ಹೊಡೆದು ಪತಿಯಿಂದ ಪತ್ನಿಯ ಕೊಲೆ - Mahanayaka
9:26 AM Thursday 12 - December 2024

ಮಚ್ಚಿನಿಂದ ಹೊಡೆದು ಪತಿಯಿಂದ ಪತ್ನಿಯ ಕೊಲೆ

gopinda pura
26/02/2022

ಬೆಂಗಳೂರು: ಮಚ್ಚಿನಿಂದ ಹೊಡೆದು ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದ ಪುರದ ಭೈರಪ್ಪ ಲೇಔಟ್​​ ನಲ್ಲಿ ನಡೆದಿದೆ.

ಆಯೇಷ ಭಾನು ಮೃತ ಮಹಿಳೆ‌. ಆಯೇಷ ಪತಿ ಮುಜಾಮಿಲ್ ಪಾಷ ಕೊಲೆ ಆರೋಪಿಯಾಗಿದ್ದಾನೆ. ಆಯೇಷ ಭಾನು ಹಾಗೂ ಮುಜಾಮಿಲ್ ಪಾಷ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ರಾಜಿ ಪಂಚಾಯತಿ ನಡೆಸಿದರೂ ದಂಪತಿ ಮತ್ತೆ ಮತ್ತೆ ಜಗಳವಾಡುತ್ತಿದ್ದರು.

ನೆನ್ನೆ ರಾತ್ರಿ ಸಹ ಗಲಾಟೆ ನಡೆದಿದ್ದು. ಪತ್ನಿ ಮೇಲೆ ಕೋಪಗೊಂಡ ಆರೋಪಿ ಮಚ್ಚಿನಿಂದ ಹೊಡೆದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮುಜಾಮಿಲ್ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ.ಈ ಘಟನೆ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದಲಿತ ಯುವಕನ ಕೊಲೆ ಪ್ರಕರಣ: ಆರೋಪಿ ಪೊಲೀಸ್‌ ವಶಕ್ಕೆ

ರಷ್ಯಾದ ಸಾರಿಗೆ ವಿಮಾನ ಹೊಡೆದುರುಳಿಸಿದ ಉಕ್ರೇನ್ : ಅಧಿಕಾರಿಗಳ ಮಾಹಿತಿ

ಫ್ಲೆಕ್ಸ್‌ ಅಳವಡಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಯುವಕ ಸಾವು

ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ

10ನೇ ಮಹಡಿಯ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ