ಮದ್ದೂರಿನಿಂದ ಸ್ಪರ್ಧಿಸುತ್ತಾರಾ ಡಿ.ಕೆ.ಶಿವಕುಮಾರ್?: ಉಡುಪಿಯಲ್ಲಿ ಡಿಕೆಶಿ ಹೇಳಿದ್ದೇನು? - Mahanayaka

ಮದ್ದೂರಿನಿಂದ ಸ್ಪರ್ಧಿಸುತ್ತಾರಾ ಡಿ.ಕೆ.ಶಿವಕುಮಾರ್?: ಉಡುಪಿಯಲ್ಲಿ ಡಿಕೆಶಿ ಹೇಳಿದ್ದೇನು?

dk shivakumar
22/01/2023

ಉಡುಪಿ: ಮದ್ದೂರಿನಿಂದ ಸ್ಪರ್ಧಿಸುವಂತೆ ಕೇಳಿದ್ದಾರೆ ನಿಜ. ನಾನು ಇಲ್ಲ ಅಂತ ಹೇಳಲ್ಲ. ಮಂಡ್ಯ ಮದ್ದೂರಿನವರು ಬಂದು ನನ್ನ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಸದ್ಯ ನಾನು ಚರ್ಚೆಗೆ ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.


Provided by

ಡಿ.ಕೆ. ಶಿವಕುಮಾರ್ ಮದ್ದೂರಿನಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಮದ್ದೂರಿನಿಂದ ಸ್ಪರ್ಧಿಸುವಂತೆ ಕೇಳಿರುವುದು ನಿಜ ಎಂದರು. ಇದೇ ವೇಳೆ ಮಗಳು ಅಥವಾ ಅಳಿಯನ ಸ್ಪರ್ಧೆ ಬಗೆಗಿನ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.

ಕರ್ನಾಟಕ ರಾಜ್ಯಕ್ಕೆ ಪ್ರಧಾನಿ ಮೋದಿ ನಿರಂತರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಳೆ ಹಾನಿಯಾದಾಗ ಜನರು ಕಷ್ಟದಲ್ಲಿದ್ದಾಗ ಪ್ರಧಾನಿ ಮೋದಿ ಬರಲಿಲ್ಲ. ರಾಜ್ಯಕ್ಕೆ ಕಳಂಕ ಬಂದಾಗ ಆರೋಪಗಳು ಬಂದಾಗ ನಿವಾರಣೆ ಮಾಡಲು ಮೋದಿ ಬರಲಿಲ್ಲ. 25 ಜನ ಸಂಸದರಿದ್ದಾರೆ, ಅವರನ್ನು ಕರೆಸಿ ಒಂದು ದಿನ ಸಭೆ ಮಾಡಿಲ್ಲ. ಮತ್ತೊಮ್ಮೆ ಬಿಜೆಪಿ ಬರುವುದಿಲ್ಲ ಅನ್ನೋದು ಪ್ರಧಾನಿಗೆ ಖಾತ್ರಿಯಾಗಿದೆ ಎಂದರು.


Provided by

ಎಲ್ಲಾ ವರದಿಗಳು ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುವುದಿಲ್ಲ ಅಂತ ಹೇಳಿವೆ. ನಮ್ಮ ಪಕ್ಷದ , ಆಂತರಿಕ , ಮಾಧ್ಯಮ ವರದಿಗಳು ಹೇಳಿವೆ. 65 ಸ್ಥಾನಕ್ಕಿಂತ ಹೆಚ್ಚು ಬಿಜೆಪಿ ಬರೋದಿಲ್ಲ. ಇದನ್ನು ಏನಾದರೂ ಮ್ಯಾಚ್ ಅಪ್ ಮಾಡೋದಕ್ಕೆ ಆಗುತ್ತಾ? ನೋಡಲು ಬರುತ್ತಿದ್ದಾರೆ ಎಂದು ಅವರು ಹೇಳಿದರು.

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗ್ತೇವೆ ಎಂದು ಮೊದಲು ಅಮಿತ್ ಶಾ ಘೋಷಿಸಿದ್ದರು. ಈಗ ಬೊಮ್ಮಾಯಿ ಕೈ ಬಿಟ್ಟು ಮೋದಿ ಅವರ ಮುಖ ತೋರಿಸಲು ಹೊರಟಿದ್ದಾರೆ. ನಮ್ಮ ಕರ್ನಾಟಕಕ್ಕೆ ಮೋದಿ ಅವರ ಮುಖ ಯಾಕೆ ಬೇಕು. ಇಲ್ಲಿ ಆಡಳಿತ ಮಾಡುವವರ ಮುಖ ಮುಂದಿಟ್ಟು ಚುನಾವಣೆ ಎದುರಿಸಿ. ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ. ಇನ್ನು 60 ದಿನ ಈ ಸರ್ಕಾರ ಇರುತ್ತೆ ಅಷ್ಟೇ. ಬಿಜೆಪಿ ಸರ್ಕಾರದ ಕೊನೆಯ ದಿನಗಳು ಬಂದಿವೆ, ಕೌಂಟ್ ಡೌನ್ ಶುರುವಾಗಿದೆ. ಫೆಬ್ರವರಿ 28ಕ್ಕೆ ಇವರದು ಕ್ಲೋಸ್ ಆಗುತ್ತೆ. ಬಳಿಕ ಚುನಾವಣಾ ನೀತಿ ಸಂಹಿತೆ ಬರುತ್ತೆ. 40 ದಿನದಲ್ಲಿ ಇವರು ಪ್ಯಾಕ್ ಮಾಡಿಕೊಂಡು ಹೋಗುತ್ತಾರೆ ಎಂದು ಡಿಕೆಶಿ ನುಡಿದರು.

ಬಿಜೆಪಿ ಧರ್ಮ ಮತ್ತು ಭಾವನೆಯನ್ನು ಮುಂದಿಟ್ಟುಕೊಂಡು ಹೋಗುತ್ತಾರೆ. ನಮ್ಮದು ಹೊಟ್ಟೆಪಾಡಿನ ರಾಜಕಾರಣ ಎಂದು ಇದೇ ವೇಳೆ ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ