ಮಗ ಮಾಡಿದ ತಪ್ಪಿಗೆ ತಂದೆ ಯಾಕೆ ರಾಜೀನಾಮೆ ನೀಡಬೇಕು?: ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಪ್ರಕರಣ ಸಂಬಂಧ ಮಾಧುಸ್ವಾಮಿ ಅಸಮಾಧಾನ

madhuswamy
03/03/2023

ಶಾಸಕ ವಿರೂಪಾಕ್ಷಪ್ಪ ಪುತ್ರ ಬಿಡಬ್ಲೂಎಸ್‌ ಎಸ್‌ ಬಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ನಿವಾಸಕ್ಕೆ ಲೋಕಾಯುಕ್ತರು ದಾಳಿ ನಡೆಸಿ ದಾಖಲೆ ರಹಿತ 6 ಕೋಟಿ ರೂ. ವಶಪಡಿಸಿಕೊಂಡಿದ್ದು, ಪ್ರಶಾಂತ್ ಮಾಡಾಳ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇದರ ಬೆನ್ನಲ್ಲೇ ಸಿಎಂ ಸೂಚನೆಯ ಮೇರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೆಎಸ್​ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ. ಮಗ ಮಾಡಿದ ತಪ್ಪಿಗೆ ತಂದೆ ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಸಚಿವ ಜೆ.ಸಿ ಮಾಧುಸ್ವಾಮಿ, ಶಾಸಕರ ಮಗ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ಲಂಚ ತೆಗೆದುಕೊಂಡಿದ್ದಾರೆ ಹೀಗಾಗಿ ಮುಂದಿನ ಪರಿಣಾಮ ಅವರೇ ಎದುರಿಸುತ್ತಾನೆ. ಆದರೆ, ಈ ವಿಷಯದಲ್ಲಿ ಶಾಸಕರು ಯಾಕೆ ರಾಜೀನಾಮೆ ಕೊಡಬೇಕು..? ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು. ಶಾಸಕರ ಮಗ ಮಾಡಿರುವ ತಪ್ಪಿಗೆ ಮುಖ್ಯಮಂತ್ರಿಗಳು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿ ಕ್ರೆಸೆಂಟ್ ರಸ್ತೆಯ ಖಾಸಗಿ ಕಚೇರಿಯಲ್ಲಿ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಮಾಡಾಳ್‌ರನ್ನು ಬಂಧಿಸಿದ್ದರು. ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಸಹ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ದಾಖಲೆ ಇಲ್ಲದ 6 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version