ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಮೊಮ್ಮಗನ ಅಂತ್ಯಕ್ರಿಯೆಯ ಚಿತೆಗೆನೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಭಯ್ ರಾಜ್ ಯಾದವ್ ತನ್ನ ಪತ್ನಿ ಸವಿತಾ ಯಾದವ್ ಅವರನ್ನು ಕೊಡಲಿಯಿಂದ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಗಾಯತ್ರಿ ತ್ರಿಪಾಠಿ ತಿಳಿಸಿದ್ದಾರೆ. “ಅವರ ಅಂತಿಮ ವಿಧಿಗಳನ್ನು ಅದೇ ಸಂಜೆ ನಡೆಸಲಾಗಿತ್ತು” ಎಂದು ಪೊಲೀಸರು ಹೇಳಿದ್ದಾರೆ.
ಅಂತ್ಯಕ್ರಿಯೆಯ ಸಮಯದಲ್ಲಿ ಅವರ ಅಜ್ಜ ರಾಮಾವತಾರ್ ಯಾದವ್ ಮನೆಯಲ್ಲಿದ್ದರು. ತಡರಾತ್ರಿ, ಇವರು ಕಾಣೆಯಾಗಿದ್ದಾರೆ.
ಶನಿವಾರ ಬೆಳಿಗ್ಗೆ ಕುಟುಂಬ ಸದಸ್ಯರು ಇವರನ್ನು ಹುಡುಕಿದ್ದಾರೆ. ಆದರೆ ಇವರನ್ನುಬ್ಕಂಡುಹಿಡಿಯಲು ಸಾಧ್ಯವಾಗದಿದ್ದಾಗ ಅವರು ಶವಸಂಸ್ಕಾರದ ಸ್ಥಳಕ್ಕೆ ಹೋಗಿದ್ದಾರೆ. ಅಲ್ಲಿ ಅವರು ಅರ್ಧ ಸುಟ್ಟ ದೇಹವನ್ನು ಕಂಡಿದ್ದಾರೆ” ಎಂದು ಪೊಲೀಸರು ಹೇಳಿದರು. “ಪೊಲೀಸರು ಬರುವಷ್ಟರಲ್ಲಿ ದೇಹವು ಸಂಪೂರ್ಣವಾಗಿ ಸುಟ್ಟುಹೋಗಿತ್ತು.
ಸವಿತಾ ಯಾದವ್ ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj