ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಗೆ ಒಂದು ವರ್ಷ ಜೈಲು
ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬಳಿಕ ಜಾಮೀನು ನೀಡಿದೆ.
2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್ವಿಜಯ್ ಸಿಂಗ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ನ್ಯಾಯಾಲಯವು ಉಜ್ಜಯಿನಿ ಸಂಸದ ಪ್ರೇಮಚಂದ್ ಗುಡ್ಡು ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ತಲಾ 25,000 ರೂ.ಗಳ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.
ಈ ಕುರಿತಂತೆ ಮಾತನಾಡಿದ ಸರ್ಕಾರಿ ವಕೀಲ ವಿಮಲ್ ಕುಮಾರ್ ಮಿಶ್ರಾ, ಎಲ್ಲಾ ಆರೋಪಿಗಳಿಗೂ ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಲಾಗಿರುವುದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿರ್ಭೂಮ್ ಹಿಂಸಾಚಾರ: ಘಟನಾ ಸ್ಥಳದಲ್ಲಿ ಮತ್ತೆ 40 ಕಚ್ಚಾ ಬಾಂಬ್‌ಗಳು ಪತ್ತೆ
ಸಿದ್ದರಾಮಯ್ಯ ಕನ್ವರ್ಟ್ ಕಾಂಗ್ರೆಸ್: ಸಚಿವ ಬಿ.ಸಿ ನಾಗೇಶ್
ದಿ ಕಾಶ್ಮೀರ್ ಫೈಲ್ ಸಿನಿಮಾ ನಿರ್ದೇಶಕನ ವಿರುದ್ಧ ದೂರು ದಾಖಲು
ಸವದತ್ತಿ ಯಲ್ಲಮ್ಮ ದೇವಸ್ಥಾನ ಬಳಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಪ್ರಮೋದ್ ಮುತಾಲಿಕ್ ಮನವಿ