ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಬಿಸಿ!
ಮಡಿಕೇರಿ: ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ್ದು, ಪೊಲೀಸರ ಎದುರೇ, ಸಿದ್ದರಾಮಯ್ಯನವರ ಕಾರಿನೊಳಗೆ ಸಾವರ್ಕರ್ ಫೋಟೋವನ್ನು ಎಸೆದಿದ್ದಾರೆ.
ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ, ಕಪ್ಪುಬಾವುಟ ಪ್ರದರ್ಶಿಸಿದ್ದಾರೆ.
ಸಿದ್ದರಾಮಯ್ಯನವರ ಕಾರನ್ನು ಅಡ್ಡಗಟ್ಟಿದ ಪ್ರತಿಭಟನಾಕಾರರು, ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದರು, ಈ ವೇಳೆ ಕಾರ್ಯಕರ್ತನೋರ್ವ ಸಾವರ್ಕರ್ ಚಿತ್ರವನ್ನು ಸಿದ್ದರಾಮಯ್ಯನವರ ಕಾರಿನೊಳಗೆ ಎಸೆದಿದ್ದಾನೆ. ತಕ್ಷಣವೇ ಎಚ್ಚೆತ್ತ ಪೊಲೀಸರು, ಚಿತ್ರವನ್ನು ಕಾರಿನಿಂದ ಹೊರಗೆ ತೆಗೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka