ಮದ್ರಸದಿಂದ ಬರುತ್ತಿದ್ದ ಬಾಲಕನ ಮೇಲೆ ಎರಗಿದ ಹುಚ್ಚುನಾಯಿ!
ಕಡಬ: ಮದ್ರಸದಿಂದ ಬರುತ್ತಿದ್ದ ಬಾಲಕನೋರ್ವನಿಗೆ ಹುಚ್ಚುನಾಯಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬಪೇಟೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದ್ದು, ಗಾಯಾಳು ಬಾಲಕನನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಹುಚ್ಚುನಾಯಿಯ ಕಡಿತಕ್ಕೊಳಗಾದ ಬಾಲಕ ಎಂದು ಗುರುತಿಸಲಾಗಿದೆ. ಮದ್ರಸ ಬಿಟ್ಟು ತೆರಳುತ್ತಿದ್ದ ವೇಳೆ ಹುಚ್ಚುನಾಯಿ ಏಕಾಏಕಿ ಬಾಲಕನ ಮೇಲೆ ಎರಗಿದ್ದು, ಕೈಗೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ ಎನ್ನಲಾಗಿದೆ.
ಘಟನೆಯ ವೇಳೆ ಬಾಲಕನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಹುಚ್ಚುನಾಯಿಯನ್ನು ಸ್ಥಳೀಯರು ಹೊಡೆದು ಕೊಂದು ಹಾಕಿದ್ದಾರೆ.
ವಾರ ಹಿಂದೆ ಕಡಬದ ಹಳೆ ಸ್ಟೇಷನ್ ಸಮೀಪದ ಬಾಪೂಜಿ ನಗರದಲ್ಲಿ ಕೂಡ ಹುಚ್ಚುನಾಯಿ ಹಾವಳಿ ಕಂಡು ಬಂದಿತ್ತು. ಈ ನಡುವೆ ಬೀದಿಯಾಯಿಗಳನ್ನು ನಿಯಂತ್ರಿಸುವ ಕೆಲಸವನ್ನು ಮಾಡಬೇಕು. ಹುಚ್ಚುನಾಯಿಗಳ ಕಾಟದಿಂದ ಯಾರು ಕೂಡ ಧೈರ್ಯವಾಗಿ ಹೊರ ಹೋಗಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಪುನೀತ್ ಅವರಿಗೆ ‘ಕರ್ನಾಟಕ ರತ್ನ’ದ ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು | ಸಿಎಂ ಬಸವರಾಜ್ ಬೊಮ್ಮಾಯಿ
ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ
ಅವನಿಗೆ ನನ್ನ ದೃಷ್ಟಿಯೇ ತಾಗಿತೇನೋ… | ಕಣ್ಣೀರು ಹಾಕುತ್ತಲೇ ಮಾತನಾಡಿದ ನಟ ಶಿವರಾಜ್ ಕುಮಾರ್
ಅಪಘಾತದಲ್ಲಿ ಮೃತಪಟ್ಟ ಪುನೀತ್ ಅಭಿಮಾನಿ ಕೊನೆಯ ಕ್ಷಣದಲ್ಲಿ ಪತ್ನಿಗೆ ಹೇಳಿದ ಮಾತು ಕಣ್ಣೀರು ತರಿಸುತ್ತದೆ!
ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕಿಯ ಎನ್ ಕೌಂಟರ್ ಸಾಧ್ಯತೆ?
ಪ್ರವಚನ ನೀಡುತ್ತಲೇ ವೇದಿಕೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಸ್ವಾಮೀಜಿ