ಮದುವೆ ಗಂಡು ಆಗಲು ತಯಾರಿದ್ದೇನೆ, ಹಿರಿಯರು ತೀರ್ಮಾನ ಮಾಡಲಿ: ಈಶ್ವರಪ್ಪ
ಶಿವಮೊಗ್ಗ: ನಾನು ಇವತ್ತು ಮದುವೆ ಗಂಡು ಆಗಲು ತಯಾರಿದ್ದೇನೆ. ತೀರ್ಮಾನ ಮಾಡಬೇಕಾದವರು ಹಿರಿಯರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದು, ಮತ್ತೊಮ್ಮೆ ಸಚಿವರಾಗುವ ಆಸೆ ವ್ಯಕ್ತಪಡಿಸಿದ್ದಾರೆ.
ಮಂತ್ರಿ ಸ್ಥಾನ ನೀಡದೇ ಇರೋದಕ್ಕೆ ಅಸಮಾಧಾನ ಹೊಂದಿದ್ದೀರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರನ್ನೇ ಕೇಳಬೇಕು. ನನ್ನನ್ನು ಕೇಳಿದರೆ ನಾನು ಏನು ಹೇಳುವುದಕ್ಕೆ ಆಗುತ್ತದೆ. ಇವತ್ತು ಮಂತ್ರಿ ಆಗು ಅಂದ್ರೆ ಇವತ್ತೇ ಆಗುತ್ತೇನೆ ಎಂದರು.
ಬೊಮ್ಮಾಯಿ, ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರದ ನಾಯಕರು ಚರ್ಚೆ ಮಾಡಬೇಕು. ಅವರು ಯಾಕೆ ಹಿಂದೆ ಮುಂದೆ ನೋಡುತ್ತಿದ್ದಾರೆ ಗೊತ್ತಿಲ್ಲ ಎಂದ ಈಶ್ವರಪ್ಪ, ಆರೋಪ ಮುಕ್ತವಾದ ಮೇಲೆ ಮತ್ತೆ ಅವಕಾಶ ಕೊಡುತ್ತೇವೆ ಅಂದಿದ್ರು ಎಂದು ಹಳೆಯ ಭರವಸೆ ನೆನಪು ಮಾಡಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka